ಬಳ್ಳಾರಿ: ಗರ್ಭಿಣಿ ಮಹಿಳೆಯರಿಗೆ ಮನೆಯಿಂದ ಆಸ್ಪತ್ರೆ ಮತ್ತು ಆಸ್ಪತ್ರೆಯಿಂದ ಮನೆಗೆ ತೆರಳಲು ಪ್ರತಿದಿನ ಬೆಳಿಗ್ಗೆ 9ರಿಂದ ಸಂಜೆ 6 ಗಂಟೆಯ ಒಳಗೆ ಆಂಬುಲೆನ್ಸ್ ವ್ಯವಸ್ಥೆಯನ್ನು ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಮಾಡಿದೆ.
ಗರ್ಭಿಣಿಯರಿಗೆ ಉಚಿತ ಆಂಬ್ಯುಲೆನ್ಸ್ ಸೇವೆ ನೀಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆ
ಲಾಕ್ಡೌನ್ನಿಂದಾಗಿ ಬಸ್ ಮತ್ತು ಖಾಸಗಿ ವಾಹನಗಳ ಸಂಚಾರ ಸ್ಥಗಿತವಾದ ಹಿನ್ನೆಲೆ ರೆಡ್ ಕ್ರಾಸ್ ಸಂಸ್ಥೆ ಮತ್ತು ಬಸವರಾಜೇಶ್ವರಿ ಪಬ್ಲಿಕ್ ಶಾಲೆ ಸಹಯೋಗದಲ್ಲಿ ಗರ್ಭಿಣಿ ಮಹಿಳೆಯರಿಗೆ ಆಂಬುಲೆನ್ಸ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ ಹೆಚ್ಚಿನ ಮಾಹಿತಿಗಾಗಿ 9535315734 ಸಂಖ್ಯೆಗೆ ಕರೆ ಮಾಡುವಂತೆ ಮನವಿ ಮಾಡಲಾಗಿದೆ.
ಭಾರತೀಯ ರೆಡ್ ಕ್ರಾಸ್ ಸಂಸ್ಥೆ
ರೆಡ್ ಕ್ರಾಸ್ ಸಂಸ್ಥೆ ಬಳ್ಳಾರಿ ಮತ್ತು ಬಸವರಾಜೇಶ್ವರಿ ಪಬ್ಲಿಕ್ ಶಾಲೆ ಸಹಯೋಗದೊಂದಿಗೆ ಈ ಸೌಕರ್ಯ ವದಗಿಸಲಾಗಿದ್ದು, ವೈದ್ಯರ ಸಲಹೆ ಮೇರೆಗೆ ವಿಮ್ಸ್ ಆಸ್ಪತ್ರೆಯಿಂದ ಗರ್ಭಿಣಿಯರು ಅವರ ಮನೆಗೆ ಅಥವಾ ಮನೆಯಿಂದ ಆಸ್ಪತ್ರೆಗೆ ಆಂಬುಲೆನ್ಸ್ನಲ್ಲಿ ಸಂಚಾರ ಮಾಡಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ರೆಡ್ ಕ್ರಾಸ್ ಸಂಸ್ಥೆಯ ವಾಲೆಂಟಿಯರ್ ಕುಮಾರಿ ಶ್ವೇತಾ ಮೊ:9535315734 ಇವರನ್ನು ಸಂಪರ್ಕಿಸಬಹುದು. ಅಲ್ಲದೆ ಸೇವೆಯನ್ನು ಸದುಪಯೋಗ ಪಡಿಸಿಕೊಳ್ಳಲು ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕಾರ್ಯದರ್ಶಿ ಎಂ.ಎ.ಶಕೀಬ್ ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ.