ಕರ್ನಾಟಕ

karnataka

ETV Bharat / city

ಬಳ್ಳಾರಿ ಜಿಲ್ಲೆಯ ವಿಭಜನೆ ಖಂಡಿಸಿ ಜನಸೈನ್ಯ ಸಂಘಟನೆಯ ಪ್ರತಿಭಟನೆ - ಬಳ್ಳಾರಿ ಜಿಲ್ಲೆಯ ವಿಭಜನೆ ಖಂಡಿಸಿ ಪ್ರತಿಭಟನೆ

ವಿಜಯನಗರ ಜಿಲ್ಲೆ ಘೋಷೆಯ ಅಧಿಕೃತ ಆದೇಶವನ್ನು ಕೂಡಲೇ ಹಿಂಪಡೆಯಬೇಕು.‌ ಇಲ್ಲದಿದ್ದಲ್ಲಿ ಇಡೀ ಜಿಲ್ಲೆಯ ಆಗು-ಹೋಗುಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗುತ್ತದೆ..

ಪ್ರತಿಭಟನೆ
ಪ್ರತಿಭಟನೆ

By

Published : Feb 8, 2021, 8:34 PM IST

ಬಳ್ಳಾರಿ :ಅಖಂಡ ಬಳ್ಳಾರಿ ಜಿಲ್ಲೆ ವಿಭಜಿಸಿ ನೂತನ ವಿಜಯನಗರ ಜಿಲ್ಲೆಯನ್ನಾಗಿ ಘೋಷಿಸಿ ಅಂತಿಮ ಅಧಿಸೂಚನೆ ಹೊರಡಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ ಕರ್ನಾಟಕ ಜನಸೈನ್ಯ ಸಂಘಟನೆಯಿಂದ ಪ್ರತಿಭಟಿಸಲಾಯಿತು.

ಕಳೆದ ಒಂದೂವರೆ ವರ್ಷದಿಂದ ನಿರಂತರವಾಗಿ ರಸ್ತೆಗಿಳಿದು ಹೋರಾಟ ಮಾಡುತ್ತಾ ಬಂದರೂ, ಹೋರಾಟಗಾರರನ್ನು ಲೆಕ್ಕಿಸದೇ ವಿಜಯನಗರ ಜಿಲ್ಲೆಯ ಆದೇಶವನ್ನು ಹೊರಡಿಸಿ ರಾಜ್ಯ ಸರ್ಕಾರದಿಂದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದು ಜನಸೈನ್ಯ ಸಂಘಟನೆಯ ರಾಜ್ಯಾಧ್ಯಕ್ಷ ಕೆ.ಎರಿಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಳ್ಳಾರಿ ಜಿಲ್ಲೆಯ ವಿಭಜನೆ ಖಂಡಿಸಿ ಜನಸೈನ್ಯ ಸಂಘಟನೆಯ ಪ್ರತಿಭಟನೆ

ಫೆಬ್ರವರಿ 5ರಂದು ಕರ್ನಾಟಕದ ಉಚ್ಛ ನ್ಯಾಯಾಲಯದಲ್ಲಿ ದಾವೆ ಹೂಡಿದ್ದು, ನ್ಯಾಯಾಂಗ ವ್ಯವಸ್ಥೆಯ ಮೇಲೆ ಅಪಾರ ನಂಬಿಕೆ ಇದೆ. ನಮಗೆ ನ್ಯಾಯ ಸಿಗುವ ಭರವಸೆ ಇದೆ ಎಂದು ಕೆ.ಎರಿಸ್ವಾಮಿ ಹೇಳಿದರು.

ವಿಜಯನಗರ ಜಿಲ್ಲೆ ಘೋಷೆಯ ಅಧಿಕೃತ ಆದೇಶವನ್ನು ಕೂಡಲೇ ಹಿಂಪಡೆಯಬೇಕು.‌ ಇಲ್ಲದಿದ್ದಲ್ಲಿ ಇಡೀ ಜಿಲ್ಲೆಯ ಆಗು-ಹೋಗುಗಳಿಗೆ ರಾಜ್ಯ ಸರ್ಕಾರವೇ ನೇರ ಹೊಣೆಯಾಗುತ್ತದೆ ಎಂದು ಎಚ್ಚರಿಸಿದರು.

ABOUT THE AUTHOR

...view details