ಹೊಸಪೇಟೆ :ಸಾಹಿತಿಗಳು ಮತ್ತು ಕವಿಗಳು ಸಾಹಿತ್ಯದ ಆಳಕ್ಕಿಳಿದು ಅನುವಾದ ಮಾಡಬೇಕು, ಅದು ಜನಸಾಮಾನ್ಯರಿಗೆ ಅರ್ಥವಾಗುವಂತಿರಬೇಕು ಎಂದು 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಅಧ್ಯಕ್ಷರಾದ ಡಾ. ಎಚ್. ಎಸ್. ವೆಂಕಟೇಶಮೂರ್ತಿ ಹೇಳಿದರು.
ಕನ್ನಡ ವಿಶ್ವವಿದ್ಯಾಲಯದ ಸಂಭಾಂಗಣದಲ್ಲಿ ನಡೆದ ಅಂತರಿಕ ಗುಣಮಟ್ಟ ಭರವಸೆ ಕೋಶ ಮತ್ತು ಭಾಷಾಂತರ ಕೇಂದ್ರ ಹಾಗೂ ಕುವೇಂಪು ಭಾಷಾ ಭಾರತಿ ಪ್ರಾಧಿಕಾರದ ಯುವ ಭಾಷಾಂತರ ತರಬೇತಿ ಕಮ್ಮಟದಲ್ಲಿ ಮಾತನಾಡಿದ ಅವರು, ಖಾಸಗಿಯಾಗಿ ಮತ್ತು ವೈಯಕ್ತಿಕವಾಗಿ ಈ ರೀತಿಯ ಅನುಸೃಷ್ಟಿಯಲ್ಲಿ ನಿಷ್ಠೆ ಬಹಳ ಮುಖ್ಯವಾಗುತ್ತದೆ ಎಂದು ಅಭಿಪ್ರಾಯಪಟ್ಟರು.