ವಿಜಯನಗರ:ಒಂದೇ ದಿನ 8 ಜನರಿಗೆ ಹುಚ್ಚು ನಾಯಿ ಕಚ್ಚಿದ ಘಟನೆ ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜಂಗಮಸೋವೇಬನಹಳ್ಳಿಯಲ್ಲಿ ನಡೆದಿದೆ. ಬುಧವಾರ ರಾತ್ರಿ ಮನೆಯ ಅಂಗಳದಲ್ಲಿ ಮಲಗಿದವರ ಮೇಲೆ ಹುಚ್ಚು ನಾಯಿ ದಾಳಿ ಮಾಡಿ 5 ಮಕ್ಕಳು ಸೇರಿದಂತೆ 8 ಜನರಿಗೆ ಕಚ್ಚಿದೆ.
ಒಂದೇ ದಿನದಲ್ಲಿ ಎಂಟು ಮಂದಿ ಮೇಲೆ ಹುಚ್ಚುನಾಯಿ ದಾಳಿ.. ಗ್ರಾಮಸ್ಥರಲ್ಲಿ ಹೆಚ್ಚಿದ ಆತಂಕ - ವಿಜಯನಗರ ಜಿಲ್ಲೆಯಲ್ಲಿ ಹುಚ್ಚು ನಾಯಿ ದಾಳಿ
ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಜಂಗಮಸೋವೇಬನಹಳ್ಳಿಯಲ್ಲಿ ಒಂದೇ ದಿನ 8 ಮಂದಿಯ ಮೇಲೆ ಹುಚ್ಚು ನಾಯಿ ದಾಳಿ ನಡೆಸಿದ್ದು, ಕೂಡಲೇ ಅದನ್ನು ಸೆರೆಹಿಡಿಯುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
ಒಂದೇ ದಿನದಲ್ಲಿ ಎಂಟು ಮಂದಿ ಮೇಲೆ ಹುಚ್ಚುನಾಯಿ ದಾಳಿ, ಗ್ರಾಮಸ್ಥರ ಆತಂಕ
ಗಾಯಗೊಂಡವರಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆಯನ್ನು ಕೊಡಿಸಲಾಗುತ್ತಿದೆ. ಹುಚ್ಚುನಾಯಿಯ ದಾಳಿ ಹಿನ್ನೆಲೆ ಗ್ರಾಮಸ್ಥರಲ್ಲಿ ಆತಂಕ ಹೆಚ್ಚಾಗಿದೆ. ಈ ಹಿಂದೆ ದನಕರುಗಳ ಮೇಲೆಯೂ ಹುಚ್ಚು ನಾಯಿ ದಾಳಿ ಮಾಡಿತ್ತು. ಕೂಡಲೇ ಅದನ್ನು ಸೆರೆಹಿಡಿಯುವಂತೆ ಜನರು ಒತ್ತಾಯಿಸಿದ್ದಾರೆ.
ಇದನ್ನೂ ಓದಿ:ಮಂಗಳೂರು: ನೀರಿನಲ್ಲಿ ಡೈವ್ ಹೊಡೆಯುವಂತೆ ಲಾರಿಯಡಿಗೆ ಜಿಗಿದ ಯುವಕ! ವಿಡಿಯೋ