ಕರ್ನಾಟಕ

karnataka

ETV Bharat / city

ವೇತನ ತಾರತಮ್ಯ ಹೋಗಲಾಡಿಸುವಂತೆ ಮಜ್ದೂರ್ ಸಂಘ ಮನವಿ - ಮಜ್ದೂರ್ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸೋಮಶೇಖರ್ ನ್ಯೂಸ್​

ವೇತನದಲ್ಲಿ ಆಗುತ್ತಿರುವ ತಾರತಮ್ಯವನ್ನು ಹೋಗಲಾಡಿಸಬೇಕು ಮತ್ತು ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು ಎಂದು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮಜ್ದೂರ್ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸೋಮಶೇಖರ್ ಅವರು ಸಿಎಂಗೆ ಮನವಿ ಮಾಡಿದ್ದಾರೆ.

Mazdoor Association
ಮಜ್ದೂರ್ ಸಂಘದಿಂದ ಬಳ್ಳಾರಿಯಲ್ಲಿ ಪ್ರತಿಭಟನೆ

By

Published : Feb 14, 2020, 7:34 PM IST

ಬಳ್ಳಾರಿ: ವೇತನದಲ್ಲಿ ಆಗುತ್ತಿರುವ ತಾರತಮ್ಯವನ್ನು ಹೋಗಲಾಡಿಸಬೇಕು ಮತ್ತು ಸಾರಿಗೆ ನೌಕರರನ್ನು ಸರ್ಕಾರಿ ನೌಕರರನ್ನಾಗಿ ಮಾಡಬೇಕು ಎಂದು ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮಜ್ದೂರ್ ಸಂಘದ ಪ್ರಧಾನ ಕಾರ್ಯದರ್ಶಿ ಬಿ.ಸೋಮಶೇಖರ್ ಅವರು ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡರು.

ಮಜ್ದೂರ್ ಸಂಘದಿಂದ ಬಳ್ಳಾರಿಯಲ್ಲಿ ಪ್ರತಿಭಟನೆ

ನಗರದ ಹಳೇ ಕೆ.ಎಸ್.ಆರ್.ಟಿ.ಸಿ ಬಸ್​ ನಿಲ್ದಾಣದಿಂದ ರಾಯಲ್ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿಯವರೆಗೆ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಮಜ್ದೂರ್ ಸಂಘದ ವತಿಯಿಂದ ಪ್ರತಿಭಟನೆ ನಡೆಸಿ, ನಂತರ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಈಟಿವಿ ಭಾರತದೊಂದಿಗೆ ಮಾತನಾಡಿದ ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ಮಜ್ದೂರ್ ಸಂಘದ ಪ್ರಧಾನ ಕಾರ್ಯದರ್ಶಿ ಬಿ. ಸೋಮಶೇಖರ್, ಈಶಾನ್ಯ ಸಾರಿಗೆ ಹಾಗೂ ಕರ್ನಾಟಕ ಸಾರಿಗೆ ನಿಗಮಗಳಲ್ಲಿ ಒಟ್ಟು 1,30,000 ಕಾರ್ಮಿಕರು ಹಗಲಿರುಳು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ರಾಜ್ಯ ಸರ್ಕಾರಿ ನೌಕರರ ವೇತನಕ್ಕಿಂತ ಕೆ.ಎಸ್.ಆರ್.ಟಿ.ಸಿ ನೌಕರರ ವೇತನ 30 ರಿಂದ 35 % ರಷ್ಟು ಕಡಿಮೆ ಇದೆ. ಜೊತೆಗೆ ಸಾರಿಗೆ ನೌಕರರನ್ನು ಸರ್ಕಾರಿ ನೌಕರನ್ನಾಗಿ ಮಾಡಬೇಕು. ವೇತನ ದಲ್ಲಿ ಆಗುತ್ತಿರುವ ತಾರತಮ್ಯ ಹೋಗಲಾಡಿಸಬೇಕು ಎಂದು ಮನವಿ ಮಾಡಿಕೊಂಡಿರು‌‌‌.

ಪ್ರತಿಭಟನೆಯಲ್ಲಿ ಗೋಪಿ ಬೆಲ್ಡೋಣ, ವೀರಭದ್ರಪ್ಪ, ಬಿ.ಸೋಮಶೇಖರ್, ಉಳವಯ್ಯ ಕೆ.ಪೂಜಾರಿ, ಯು.ಈರಣ್ಣ, ಬೀಮಲಿಂಗ ಮತ್ತು ಈಶಾನ್ಯ ರಸ್ತೆ ಸಾರಿಗೆ ಸಂಸ್ಥೆಯ ಮಜ್ದೂರ್ ಸಂಘದ ಸದಸ್ಯರು ಹಾಜರಿದ್ದರು.

For All Latest Updates

ABOUT THE AUTHOR

...view details