ಬಳ್ಳಾರಿ: ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ಮೆಟ್ರಿ ಗ್ರಾಮ ಪಂಚಾಯತ್ನ ಬಿಲ್ ಕಲೆಕ್ಟರ್ ಹೆಚ್. ಶಿವಪ್ಪ ಆತ್ಮಹತ್ಯೆಗೆ ಯತ್ನ ನಡೆಸಿದ್ದಾರೆ. ತನ್ನ ನಿರ್ಧಾರಕ್ಕೆ ಪಂಚಾಯತ್ ಅಧ್ಯಕ್ಷ ಮತ್ತು ಸದಸ್ಯರೇ ಕಾರಣ ಎಂದು ಆರೋಪಿಸಿರುವ ವಿಡಿಯೋ ವೈರಲ್ ಆಗಿದೆ.
'ಮೆಟ್ರಿ ಗ್ರಾಮ ಪಂಚಾಯತ್ ಅಧ್ಯಕ್ಷ, ಸದಸ್ಯರು ನನಗೆ ಕೆಲಸ ಮಾಡಲು ಬಿಡುತ್ತಿಲ್ಲ. ಜಾತಿ ನಿಂದನೆ ಮಾಡಿ ಅನಗತ್ಯ ಮಾನಸಿಕವಾಗಿ ಕಿರುಕುಳ ನೀಡುತ್ತಿದ್ದಾರೆ. ನಾನೇನಾದ್ರೂ ಸತ್ತರೆ, ನನ್ನ ಸಾವಿಗೆ ಅವರೇ ಕಾರಣ' ಎಂದು ಹೇಳಿರುವುದು ವಿಡಿಯೋದಲ್ಲಿದೆ.