ಬಳ್ಳಾರಿ: ಸದ್ಯದ ಪರಿಸ್ಥಿತಿಯಲ್ಲಿ ರಾಜ್ಯದಲ್ಲಿ ಲಾಕ್ಡೌನ್ ಮಾಡೋದು ಬೇಡ ಎಂದು ಸಮಾಜ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಅಭಿಪ್ರಾಯಪಟ್ಟಿದ್ದಾರೆ.
ಬಳ್ಳಾರಿ ಮಹಾನಗರ ಪಾಲಿಕೆ ಚುನಾವಣೆ ಹಿನ್ನೆಲೆಯಲ್ಲಿ ಇಂದು ವಿವಿಧ ವಾರ್ಡ್ಗಳ ಬಿಜೆಪಿಯ ಅಭ್ಯರ್ಥಿಗಳ ಪರ ಪ್ರಚಾರಕ್ಕೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಅವರು ಮಾತನಾಡಿದರು.
ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳವಾಗಿರುವ ಜಿಲ್ಲೆಗಳಲ್ಲಿ ನೈಟ್ ಕರ್ಫ್ಯೂ ಜಾರಿಗೊಳಿಸಲಿ. ಆದರೆ, ರಾಜ್ಯದಲ್ಲಿ ಲಾಕ್ಡೌನ್ ಮಾಡೋದು ಬೇಡ. ಲಾಕ್ಡೌನ್ ಜಾರಿಯಿಂದ ಜನಸಾಮಾನ್ಯರು, ವ್ಯಾಪಾರಸ್ಥರಿಗೆ ತೊಂದರೆಯಾಗುತ್ತದೆ. ಈ ಬಗ್ಗೆ ಈಗಾಗಲೇ ಮುಖ್ಯಮಂತ್ರಿಗಳಿಗೆ ಸಲಹೆ ನೀಡಿರುವೆ. ಕೊರೊನಾ ನಿಯಂತ್ರಣದ ಕುರಿತು ಸಿಎಂ ಸರ್ವಪಕ್ಷ ಸಭೆ ಕರೆದಿದ್ದಾರೆ. ಈ ಸಭೆಯಲ್ಲಿ ವಿಪಕ್ಷ ನಾಯಕರ ಸಲಹೆಗಳನ್ನೂ ಕೂಡ ಪಡೆಯಲಾಗುವುದು. ಜನರು ಕೊರೊನಾ ನಿಯಮಗಳನ್ನು ಪಾಲಿಸಬೇಕು. ಕೊರೊನಾ ನಿಯಂತ್ರಣಕ್ಕೆ ಜನರ ಸಹಕಾರ ಅಗತ್ಯ ಎಂದರು.