ಬಳ್ಳಾರಿ:ಕೊರೊನಾ ವೈರಸ್ ಹರಡದಂತೆ ತಡೆಯಲು ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್, 3 ಸಾವಿರ ರೂಪಾಯಿ ಚೆಕ್ ವಿತರಣೆ ಮೂಲಕ ಪ್ರೋತ್ಸಾಹಧನ ನೀಡಿದರು.
ನಗರದ ಬಿ.ಡಿ.ಎ.ಎ ಫುಟ್ಬಾಲ್ ಕ್ರೀಡಾಂಗಣದಲ್ಲಿ ಇಂದು ಸಹಕಾರ ಇಲಾಖೆ ಮತ್ತು ಬಳ್ಳಾರಿ ಜಿಲ್ಲೆಯ ವಿವಿಧ ಸಹಕಾರ ಸಂಘಗಳ/ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಆಶಾ ಕಾರ್ಯಕರ್ತೆಯರಿಗೆ ಪ್ರೊತ್ಸಾಹಧನ ವಿತರಣೆ ಸಮಾರಂಭಕ್ಕೆ ಎಸ್.ಟಿ.ಸೋಮಶೇಖರ್ ದೀಪ ಬೆಳಗುವ ಮೂಲಕ ಚಾಲನೆ ನೀಡಿದರು. ಈ ಸಮಯದಲ್ಲಿ ಸಹಕಾರ ಸಂಘದ ಸುನೀತ ಸಿದ್ದರಾಮ ಅವರು ಆಶಾ ಕಾರ್ಯಕರ್ತೆಯರಿಗೆ ಕೋ-ಆಪರೇಟಿವ್ ಬ್ಯಾಂಕ್ ಸಹಾಯ ಮಾಡಬೇಕು. ಒಬ್ಬರಿಗೆ 50 ಸಾವಿರ ಸಾಲ ಸೌಲಭ್ಯ ನೀಡಬೇಕು ಎಂದು ಮನವಿ ಮಾಡಿದರು.