ಕರ್ನಾಟಕ

karnataka

ETV Bharat / city

ಮಿಂಟೋ ಆಸ್ಪತ್ರೆಯಲ್ಲಿ ದೃಷ್ಟಿ ಕಳೆದುಕೊಂಡವರಿಗೆ 25 ಲಕ್ಷ ಪರಿಹಾರಕ್ಕೆ ಆಗ್ರಹ - ಮಿಂಟೋ ಆಸ್ಪತ್ರೆ ಶಸ್ತ್ರಚಿಕಿತ್ಸೆಯಲ್ಲಿ ದೃಷ್ಟಿ ಕಳೆದುಕೊಂಡವರಿಗೆ ಪರಿಹಾರಕ್ಕೆ ಆಗ್ರಹ

ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ಜುಲೈ ತಿಂಗಳಲ್ಲಿ ನಡೆದ ನೇತ್ರ ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ದೃಷ್ಟಿ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರ ಪರಿಹಾರ ಘೋಷಿಸಬೇಕು ಎಂದು ಕರ್ನಾಟಕ ಜನಸೈನ್ಯ ರಾಜ್ಯಾಧ್ಯಕ್ಷ ಕೆ.ಎರಿಸ್ವಾಮಿ ಆಗ್ರಹಿಸಿದ್ದಾರೆ.

ಕರ್ನಾಟಕ ಜನಸೈನ್ಯ ರಾಜ್ಯಾಧ್ಯಕ್ಷ ಕೆ.ಎರಿಸ್ವಾಮಿ

By

Published : Nov 11, 2019, 4:46 PM IST

Updated : Nov 11, 2019, 8:34 PM IST

ಬಳ್ಳಾರಿ:ಮಿಂಟೋ ಆಸ್ಪತ್ರೆ ಶಸ್ತ್ರಚಿಕಿತ್ಸೆಯಲ್ಲಿ ದೃಷ್ಟಿ ಕಳೆದುಕೊಂಡ 22 ಜನರಿಗೆ ತಲಾ 25 ಲಕ್ಷ ಪರಿಹಾರ ಮತ್ತು ಪ್ರತಿ ತಿಂಗಳು 10 ಸಾವಿರ ರೂ. ಪಿಂಚಣಿ ನೀಡಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಪ್ರತಿಭಟನೆ ಮಾಡುತ್ತೇವೆ ಎಂದು ಕರ್ನಾಟಕ ಜನಸೈನ್ಯ ರಾಜ್ಯಾಧ್ಯಕ್ಷ ಕೆ.ಎರಿಸ್ವಾಮಿ ಹೇಳಿದ್ರು.

ಕರ್ನಾಟಕ ಜನಸೈನ್ಯ ರಾಜ್ಯಾಧ್ಯಕ್ಷ ಕೆ.ಎರಿಸ್ವಾಮಿ ಪತ್ರಿಕಾಗೋಷ್ಠಿ

ನಗರದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಅವರು, ಬೆಂಗಳೂರಿನ ಮಿಂಟೋ ಆಸ್ಪತ್ರೆಯಲ್ಲಿ ಜುಲೈ ತಿಂಗಳಲ್ಲಿ ನಡೆದ ನೇತ್ರ ಶಸ್ತ್ರಚಿಕಿತ್ಸೆ ಫಲಕಾರಿಯಾಗದೆ ದೃಷ್ಟಿ ಕಳೆದುಕೊಂಡ ಸಂತ್ರಸ್ತರಿಗೆ ಶೀಘ್ರ ಪರಿಹಾರ ಘೋಷಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಜಿಲ್ಲಾಧಿಕಾರಿಗಳ ಮೂಲಕ ಮನವಿ ಪತ್ರವನ್ನು ಸಲ್ಲಿಸುತ್ತೇವೆ ಎಂದರು.

ಬೇಡಿಕೆಗಳು:

  • ದೃಷ್ಟಿ ಕಳೆದುಕೊಂಡ ಪ್ರತಿ ವ್ಯಕ್ತಿಗೆ 25 ಲಕ್ಷ ರೂಪಾಯಿ ಪರಿಹಾರ
  • ಜೀವನಾಧಾರಕ್ಕಾಗಿ ಪ್ರತಿ ತಿಂಗಳು ತಲಾ 10 ಸಾವಿರ ರೂ. ಪಿಂಚಣಿ
  • ವೈದ್ಯರು ತಪ್ಪಿತಸ್ಥರಿದ್ದಲ್ಲಿ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ
  • ಶಸ್ತ್ರಚಿಕಿತ್ಸೆ ವೇಳೆ ಬಳಸಿದ ಔಷಧಿ ಕಳಪೆಯಿದ್ದಲ್ಲಿ ಔಷಧಿ ಸರಬರಾಜು ಮಾಡಿದವರ ವಿರುದ್ಧ ಕ್ರಮ

ಒಟ್ಟಾರೆ ಮಿಂಟೋ ಆಸ್ಪತ್ರೆಯಲ್ಲಿ ದೃಷ್ಟಿ ಕಳೆದುಕೊಂಡವರಿಗೆ ನ್ಯಾಯ ಒದಗಿಸಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಹಂತ ಹಂತವಾಗಿ ಪ್ರತಿಭಟನೆ ಮಾಡುತ್ತೇವೆ ಎಂದು ಎಚ್ಚರಿಕೆ ನೀಡಿದರು.

Last Updated : Nov 11, 2019, 8:34 PM IST

ABOUT THE AUTHOR

...view details