ಬಳ್ಳಾರಿ: ಚಾಮರಾಜಪೇಟೆ ಕಾಂಗ್ರೆಸ್ ಶಾಸಕ ಜಮೀರ್ ಅಹ್ಮದ್ರನ್ನ ಹೋಮ್ ಕ್ವಾರಂಟೈನ್ ಮಾಡುತ್ತೇವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ. ಶ್ರೀರಾಮುಲು ಅವರು ತಿಳಿಸಿದ್ದಾರೆ.
ಶಾಸಕ ಜಮೀರ್ ಶೀಘ್ರ ಹೋಮ್ ಕ್ವಾರಂಟೈನ್ ಗೆ: ಶ್ರೀರಾಮುಲು ಹೀಗೆ ಹೇಳಿದ್ಯಾಕೆ? - ಶಾಸಕ ಜಮೀರ್ ಅಹ್ಮದ್ ಹೇಳಿಕೆ
ಕೊರೊನಾ ವೈರಸ್ ಶಂಕಿತ ಮಹಿಳೆಯೊಬ್ಬರ ಶವ ಸಂಸ್ಕಾರದಲ್ಲಿ ಶಾಸಕ ಜಮೀರ್ ಅಹ್ಮದ್ ಭಾಗವಹಿಸಿದ್ದರು ಎಂಬ ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರ ಹೇಳಿಕೆ ಮೇಲೆ ಜಮೀರ್ ಅಹ್ಮದ್ ಅವರನ್ನೂ ಹೋಮ್ ಕ್ವಾರಂಟೈನ್ನಲ್ಲಿ ಇಡಲಾಗುವುದು ಎಂದು ಆರೋಗ್ಯ ಸಚಿವ ಬಿ. ಶ್ರೀರಾಮುಲು ಹೇಳಿದ್ದಾರೆ.
ನಗರದ ವಿದ್ಯಾನಗರದಲ್ಲಿಂದು ಬಡ ಹಾಗೂ ಕೂಲಿ ಕಾರ್ಮಿಕರಿಗೆ ದಿನಸಿ ಕಿಟ್ ವಿತರಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿ, ಗೃಹ ಸಚಿವ ಬಸವರಾಜ ಬೊಮ್ಮಾಯಿ ಸೂಚನೆಯ ಮೇರೆಗೆ ಶೀಘ್ರವೇ ಶಾಸಕ ಜಮೀರ್ ಅಹ್ಮದ್ ಅವರನ್ನ ಹೋಮ್ ಕ್ವಾರಂಟೈನ್ನಲ್ಲಿ ಇರಿಸಲಾಗುವುದು ಎಂದು ಹೇಳಿದರು.
ಚಾಮರಾಜಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ಕೊರೊನಾ ವೈರಸ್ ಶಂಕಿತ ಮಹಿಳೆಯೊಬ್ಬರು ಮೃತಪಟ್ಟಿದ್ದಾಗ, ಅವರ ಶವ ಸಂಸ್ಕಾರದಲ್ಲಿ ಜಮೀರ್ ಅಹ್ಮದ್ ಭಾಗಿಯಾಗಿದ್ದರು ಎಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ. ಹೀಗಾಗಿ, ಅವರನ್ನು ಎಲ್ಲ ರೀತಿಯ ಪರೀಕ್ಷೆ ಮಾಡಿ ನಿಗಾದಲ್ಲಿ ಇರಿಸಲಾಗುವುದು ಎಂದು ಸಚಿವ ಶ್ರೀರಾಮುಲು ತಿಳಿಸಿದ್ದಾರೆ.