ಕರ್ನಾಟಕ

karnataka

ETV Bharat / city

ಬಳ್ಳಾರಿ: ವಿದ್ಯಾರ್ಥಿನಿ ಮೇಲೆ ಕೋತಿ ದಾಳಿ - ಕೋತಿ ದಾಳಿ

ಬಳ್ಳಾರಿ ಜಿಲ್ಲೆಯ ಕಂಪ್ಲಿ ತಾಲೂಕಿನ ನೆಲ್ಲುಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ವಿದ್ಯಾರ್ಥಿನಿ ಮೇಲೆ ಕೋತಿಯೊಂದು ದಾಳಿ ಮಾಡಿದೆ.

Monkey attacked school student
ವಿದ್ಯಾರ್ಥಿನಿ ಮೇಲೆ ಕೋತಿ ದಾಳಿ

By

Published : Jun 29, 2022, 10:47 AM IST

ಬಳ್ಳಾರಿ:ಜಿಲ್ಲೆಯಲ್ಲಿ ಹಲವು ದಿನಗಳಿಂದ ಕೋತಿಗಳ ಕಾಟದಿಂದಾಗಿ ಜನರ ನೆಮ್ಮದಿ ಕಾಣೆಯಾಗಿದೆ.ಕಂಪ್ಲಿ ತಾಲೂಕಿನ ನೆಲ್ಲುಡಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಬಳಿ ನಿನ್ನೆ(ಮಂಗಳವಾರ) ಸಂಜೆ ವಿದ್ಯಾರ್ಥಿನಿ ಮೇಲೆ ಕೋತಿ ದಾಳಿ ಮಾಡಿ ಗಾಯಗೊಳಿಸಿದೆ.

ಕೋತಿಗಳು ನಿತ್ಯ ಸಾರ್ವಜನಿಕರನ್ನು ಕಾಡುತ್ತಿವೆ. ಮನೆಯ ಮೇಲೆ ದಾಳಿಯಿಡುವ ಕೋತಿಗಳ ಹಿಂಡು ಕೈಗೆ ಸಿಕ್ಕ ವಸ್ತುಗಳನ್ನು ಹೊತ್ತೊಯ್ಯುತ್ತಿವೆ. ಒಣಗಲು ಹಾಕಿದ ಬಟ್ಟೆಗಳು, ತಗಡಿನ ಶೀಟ್ ಮೇಲೆ ಕುಣಿದಾಡುವ ಕೋತಿಗಳು ಎಲ್ಲವನ್ನೂ ಹಾಳು ಮಾಡುತ್ತಿವೆ. ಬೈಕ್ ಸವಾರರು ಹಾಗೂ ಟ್ರ್ಯಾಕ್ಟರ್ ಚಾಲಕರು ಭಯದ ನೆರಳಿನಲ್ಲಿಯೇ ತಿರುಗಾಡಬೇಕಾದ ಸ್ಥಿತಿ ಇದೆ.

ಬಳ್ಳಾರಿಯಲ್ಲಿ ಶಾಲಾ ವಿದ್ಯಾರ್ಥಿನಿ ಮೇಲೆ ಕೋತಿ ದಾಳಿ

ಗ್ರಾಮದಲ್ಲಿ ಕೋತಿಗಳ ಹಾವಳಿ ಹೆಚ್ಚಾಗಿದ್ದರೂ, ಅರಣ್ಯಾಧಿಕಾರಿಗಳು, ಜನಪ್ರತಿನಿಧಿಗಳು ಯಾವುದೇ ಕ್ರಮಕ್ಕೆ ಮುಂದಾಗಿಲ್ಲ. ಗ್ರಾಮ ಪಂಚಾಯತ್​​ ಅಧಿಕಾರಿಗಳ ನಿರ್ಲಕ್ಷ್ಯವೇ ಇದಕ್ಕೆ ಕಾರಣ. ಕೋತಿಗಳ ಕಾಟದಿಂದ ಮಕ್ಕಳು ಶಾಲೆಗೆ ತೆರಳಲು ಹೆದರುತ್ತಿದ್ದಾರೆ. ಈಗಲಾದರೂ ಅಧಿಕಾರಿಗಳು ಎಚ್ಚೆತ್ತುಕೊಂಡು ಸೂಕ್ತ ಕ್ರಮ ಜರುಗಿಸಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಇದನ್ನೂ ಓದಿ:ಭಟ್ಕಳ: ಮಂಗ ದಾಳಿಯಿಂದ ಮಹಿಳೆ ಗಂಭೀರ

ABOUT THE AUTHOR

...view details