ವಿಜಯನಗರ: ಮಲೆನಾಡು ಪ್ರದೇಶದಲ್ಲಿ ಸತತ ಮಳೆ ಸುರಿಯುತ್ತಿರುವ ಪರಿಣಾಮ ಕಲ್ಯಾಣ ಕರ್ನಾಟಕದ ಜೀವನಾಡಿ ತುಂಗಭದ್ರಾ ಜಲಾಶಯಕ್ಕೆ ಬರುತ್ತಿರುವ ಒಳಹರಿವಿನ ಪ್ರಮಾಣದಲ್ಲಿ ಗಣನೀಯ ಏರಿಕೆಯಾಗಿದ್ದು, ನದಿಗೆ ಒಂದು ಲಕ್ಷಕ್ಕೂ ಅಧಿಕ ಕ್ಯೂಸೆಕ್ ನೀರು ಹರಿಬಿಡಲಾಗಿದೆ.
ಭಾನುವಾರ ಜಲಾಶಯಕ್ಕೆ 1,09,214 ಕ್ಯೂಸೆಕ್ ನೀರು ಹರಿದು ಬಂದ ಹಿನ್ನೆಲೆಯಲ್ಲಿ ಜಲಾಶಯದ 33 ಗೇಟ್‌ಗಳ ಪೈಕಿ 30 ಗೇಟ್‌ಗಳನ್ನು ತೆರೆದು ನದಿಗೆ ನೀರು ಹರಿಸಲಾಗಿದೆ. 20 ಕ್ರಸ್ಟ್ ಗೇಟ್ ಗಳನ್ನು 2.50 ಅಡಿ, 10 ಗೇಟ್‌ಗಳನ್ನು 1.50 ಅಡಿ ಎತ್ತರಕ್ಕೆ ತೆರೆದು ಹೆಚ್ಚುವರಿ ನೀರು ಹರಿಬಿಡಲಾಗಿದೆ.