ಹೊಸಪೇಟೆ (ಬಳ್ಳಾರಿ): ನಗರದಲ್ಲಿ ಪ್ಲಾಸ್ಟಿಕ್ ಮಾರಾಟ ಮಾಡುತ್ತಿದ್ದ ಅಂಗಡಿಗಳ ಮೇಲೆ ದಾಳಿ ನಡೆಸಿದ ನಗರಸಭೆ ಅಧಿಕಾರಿಗಳು, 450 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ.
ಹೊಸಪೇಟೆಯಲ್ಲಿ ಅಂಗಡಿಗಳ ಮೇಲೆ ದಾಳಿ: 450 ಕೆಜಿ ಪ್ಲಾಸ್ಟಿಕ್ ವಶ - ಬಳ್ಳಾರಿ ನ್ಯೂಸ್
ಹೊಸಪೇಟೆ ನಗರದ ತರಕಾರಿ ಮಾರುಕಟ್ಟೆ, ಬಸ್ ನಿಲ್ದಾಣ, ಮೂರಂಗಡಿ ವೃತ್ತದ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, 450 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ.
ಹೊಸಪೇಟೆಯಲ್ಲಿ ಪ್ಲಾಸ್ಟಿಕ್ ಮಾರಾಟದ ಅಂಗಡಿಗಳ ಮೇಲೆ ದಾಳಿ...450 ಕೆಜಿ ಪ್ಲಾಸ್ಟಿಕ್ ವಶ
ಹೊಸಪೇಟೆ ನಗರದ ತರಕಾರಿ ಮಾರುಕಟ್ಟೆ, ಬಸ್ ನಿಲ್ದಾಣ, ಮೂರಂಗಡಿ ವೃತ್ತದ ಅಂಗಡಿಗಳ ಮೇಲೆ ದಾಳಿ ನಡೆಸಿದ ಅಧಿಕಾರಿಗಳು, 450 ಕೆಜಿ ಪ್ಲಾಸ್ಟಿಕ್ ವಶಪಡಿಸಿಕೊಂಡಿದ್ದಾರೆ. ಈ ವೇಳೆ ಮಾತನಾಡಿದ ನಗರಸಭೆ ಆರೋಗ್ಯ ನಿರೀಕ್ಷಕ ವೆಂಕಟೇಶ, ಪ್ಲಾಸ್ಟಿಕ್ ವೇಸ್ಟ್ ಮ್ಯಾನೇಜ್ಮೆಂಟ್ ಕಾಯ್ದೆಯಡಿ ಅಂಗಡಿಗಳ ಮೇಲೆ ದಾಳಿ ನಡೆಸಿ ಪ್ಲಾಸ್ಟಿಕ್ ವಶಕ್ಕೆ ಪಡೆದುಕೊಂಡು ಮಾರಾಟ ಮಾಡದಂತೆ ಸೂಚಿಸಲಾಗಿದೆ.
ಮತ್ತೊಮ್ಮೆ ಪ್ಲಾಸ್ಟಿಕ್ ಮಾರಾಟ ಮಾಡಿದರೆ ದಂಡ ವಸೂಲಿ ಮಾಡಲಾಗುವುದು ಎಂದು ಎಚ್ಚರಿಕೆ ನೀಡಲಾಗಿದೆ ಎಂದರು.