ಬಳ್ಳಾರಿ: ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ, ಸಮರ್ಪಕವಾದ ಪ್ರಮಾಣದಲ್ಲಿದೆ. ಆಕ್ಸಿಜನ್ ಸಮರ್ಪಕ ಪೂರೈಕೆಗೆ ಸಂಬಂಧಿಸಿದಂತೆ ನೋಡಲ್ ಅಧಿಕಾರಿಗಳನ್ನು ನೇಮಕ ಮಾಡಲಾಗಿದ್ದು, ಯಾವುದೇ ರೀತಿಯ ತೊಂದರೆಯಿಲ್ಲದಂತೆ ಪ್ರತಿನಿತ್ಯ ನಿರ್ವಹಣೆ ಮಾಡಲಾಗುತ್ತಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಸ್ಪಷ್ಟಪಡಿಸಿದ್ದಾರೆ.
ಬಳ್ಳಾರಿ ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ: ಡಿಸಿ ನಕುಲ್ ಸ್ಪಷ್ಟನೆ ಬಳ್ಳಾರಿ ಜಿಲ್ಲೆಯ ಸರ್ಕಾರಿ ಆಸ್ಪತ್ರೆಗಳಲ್ಲಿ 1500ಕ್ಕೂ ಹೆಚ್ಚು ಆಕ್ಸಿಜನ್ ಬೆಡ್‍ಗಳು ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ 350 ಆಕ್ಸಿಜನ್ ಬೆಡ್‍ಗಳು ಕಾರ್ಯನಿರ್ವಹಿಸುತ್ತಿವೆ. ಕೋವಿಡ್ ಮತ್ತು ನಾನ್ ಕೋವಿಡ್‍ಗಾಗಿ 88 ವೆಂಟಿಲೇಟರ್ಗಳಿವೆ.
ಎಲ್ಲಾ ರೀತಿಯ ಸಲಕರಣೆಗಳಿಗೆ ಮತ್ತು ಆಕ್ಸಿಜನ್ ಬೆಡ್‍ಗಳಿಗೆ ಯಾವುದೇ ರೀತಿಯ ಆಕ್ಸಿಜನ್ ತೊಂದರೆಯಾಗದಂತೆ ನಿರ್ವಹಿಸುವ ನಿಟ್ಟಿನಲ್ಲಿ ತಾಲೂಕು ಆಸ್ಪತ್ರೆಗಳಲ್ಲಿ ಜಂಬೋ ಸಿಲಿಂಡರ್ಗಳ ಮುಖಾಂತರ, ಜಿಲ್ಲಾಸ್ಪತ್ರೆಯಲ್ಲಿ 6 ಕಿಲೋ ಲೀಟರ್ನ ಲಿಕ್ವಿಡ್ ಆಕ್ಸಿಜನ್ ಕಂಟೈನರ್ ಮುಖಾಂತರ, ಟ್ರಾಮಾದಲ್ಲಿ 13 ಕಿಲೋ ಲೀಟರ್ ಮತ್ತು ವಿಮ್ಸ್ನಲ್ಲಿ 19 ಕಿಲೋ ಲೀಟರ್ ಟ್ಯಾಂಕ್‍ಗಳನ್ನು ಅಳವಡಿಸಲಾಗಿದೆ.
ಇದುವರೆಗೆ ಬಳ್ಳಾರಿ ಜಿಲ್ಲೆಯಲ್ಲಿ ಯಾವುದೇ ರೀತಿಯ ಆಕ್ಸಿಜನ್ ತೊಂದರೆಯಾಗದಂತೆ ನೋಡಿಕೊಳ್ಳಲಾಗಿದ್ದು, ಮುಂದೆಯೂ ಸಮರ್ಪಕವಾಗಿ ನಿರ್ವಹಿಸಲಾಗುತ್ತದೆ ಎಂದರು.