ಹೊಸಪೇಟೆ(ವಿಜಯನಗರ):ಖಾತೆ ಹಂಚಿಕೆ ಬಗ್ಗೆ ಪದೇ ಪದೆ ಮಾತನಾಡುವುದಿಲ್ಲ. ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಗಮನಕ್ಕೆ ತರಲಾಗಿದೆ ಎಂದು ಪ್ರವಾಸೋದ್ಯಮ ಸಚಿವ ಆನಂದ ಸಿಂಗ್ ಹೇಳಿದರು.
ಮುಖ್ಯಮಂತ್ರಿಗಳಿಗೆ ಮುಜುಗರವಾಗುವ ರೀತಿ ಹೇಳಿಕೆ ನೀಡಲ್ಲ: ಸಚಿವ ಆನಂದ ಸಿಂಗ್ - political development in Karnataka
ಮುಖ್ಯಮಂತ್ರಿಗಳಿಗೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆ ನೀಡುವುದಿಲ್ಲ. ಅವರ ತೀರ್ಮಾನಕ್ಕಾಗಿ ಕಾಯುತ್ತಿರುವೆ ಎಂದು ಸಚಿವ ಆನಂದ ಸಿಂಗ್ ಹೇಳಿದ್ದಾರೆ.
![ಮುಖ್ಯಮಂತ್ರಿಗಳಿಗೆ ಮುಜುಗರವಾಗುವ ರೀತಿ ಹೇಳಿಕೆ ನೀಡಲ್ಲ: ಸಚಿವ ಆನಂದ ಸಿಂಗ್ Minister Anand Singh](https://etvbharatimages.akamaized.net/etvbharat/prod-images/768-512-12717411-thumbnail-3x2-net.jpg)
ಸಚಿವ ಆನಂದ ಸಿಂಗ್
ಸಚಿವ ಆನಂದ ಸಿಂಗ್ ಪ್ರತಿಕ್ರಿಯೆ
ನಗರದ ವೇಣುಗೋಪಾಲ ದೇವಸ್ಥಾನದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿಗಳಿಗೆ ಮುಜುಗರವಾಗುವ ರೀತಿಯಲ್ಲಿ ಹೇಳಿಕೆಯನ್ನು ನೀಡುವುದಿಲ್ಲ. ಹಾಗಾಗಿ ಮಾಧ್ಯಮದವರ ಮುಂದೆ ಏನು ಹೇಳುವುದಿಲ್ಲ. ಮುಖ್ಯಮಂತ್ರಿ ಅವರ ತೀರ್ಮಾನಕ್ಕಾಗಿ ಕಾಯುತ್ತಿರುವೆ ಎಂದು ತಿಳಿಸಿದರು.
ಇದೇ ವೇಳೆ ವೇಣುಗೋಪಾಲ ದೇವಸ್ಥಾನದದಲ್ಲಿ ಶ್ರಾವಣ ಮಾಸದಲ್ಲಿ ನಿರಂತರವಾಗಿ ಮೂರು ದಿನಗಳ ಕಾಲ ವಿಶೇಷ ಪೂಜಾ ಕೈಂಕರ್ಯ ನಡೆಯುತ್ತಿರುತ್ತವೆ ಎಂದು ಹೇಳಿದರು.