ಕರ್ನಾಟಕ

karnataka

ETV Bharat / city

ಬಳ್ಳಾರಿಯಲ್ಲಿ ಕೊರೊನಾ ವಾರಿಯರ್​​ಗೂ‌ ಅಂಟಿದ ಮಹಾಮಾರಿ - ಬಳ್ಳಾರಿ ಕೋವಿಡ್​-19 ಕೇಸ್​

ನಿನ್ನೆ ಬಳ್ಳಾರಿ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್​ನಲ್ಲಿ ಸೇವೆಯಲ್ಲಿ ತೊಡಗಿಕೊಂಡಿದ್ದ 14 ಮಂದಿಯ ಗಂಟಲು ದ್ರವ ಮತ್ತು ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ಪೈಕಿ 13 ಮಂದಿಯ ವರದಿ ನೆಗೆಟಿವ್ ಬಂದಿದ್ದು, ಕೇವಲ‌ ಒಂದು ಮಾತ್ರ ಪಾಸಿಟಿವ್ ಬಂದಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ಕೊರೊನಾ
ಕೊರೊನಾ

By

Published : May 26, 2020, 10:41 AM IST

ಬಳ್ಳಾರಿ: ಗಣಿನಾಡಿನ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್ ವಾರ್ಡ್​ನಲ್ಲಿ ಸೇವೆಯಲ್ಲಿ ತೊಡಗಿಕೊಂಡಿದ್ದ ಪುರುಷ ಸ್ಟಾಫ್ ನರ್ಸ್​ವೊಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, ಇದೀಗ ಜಿಲ್ಲೆಯಲ್ಲಿ ಒಟ್ಟು ಸೋಂಕಿತರ ಸಂಖ್ಯೆ 37ಕ್ಕೆ ಏರಿಕೆಯಾಗಿದೆ.

ಜಿಲ್ಲೆಯಲ್ಲಿ ಈವರೆಗೆ 15 ಮಂದಿ ಗುಣಮುಖರಾಗಿದ್ದು, ಕೇವಲ ಒಬ್ಬರು ಮಾತ್ರ ಸಾವನ್ನಪ್ಪಿದ್ದಾರೆ. ಐಸೋಲೇಷನ್​​ನಲ್ಲಿ 21 ಜನ ಚಿಕಿತ್ಸೆ ಪಡೆಯುತ್ತಿದ್ದಾರೆ. ನಿನ್ನೆ ಜಿಲ್ಲಾ ಕೋವಿಡ್ ಆಸ್ಪತ್ರೆಯ ಐಸೋಲೇಷನ್​ನಲ್ಲಿ ಕೊರೊನಾ ವಾರಿಯರ್​​ ಆಗಿ ಸೇವೆಯಲ್ಲಿ ತೊಡಗಿಕೊಂಡಿದ್ದ 14 ಮಂದಿಯ ಗಂಟಲು ದ್ರವ ಮತ್ತು ರಕ್ತದ ಮಾದರಿ ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಲಾಗಿತ್ತು. ಆ ಪೈಕಿ 13 ಮಂದಿಯ ವರದಿ ನೆಗೆಟಿವ್ ಬಂದಿದ್ದು, ಕೇವಲ‌ ಒಂದು ಮಾತ್ರ ಪಾಸಿಟಿವ್ ಬಂದಿದೆ. ಈ ಕುರಿತು ವರದಿ ಬಂದಿದ್ದು, ಕೊರೊನಾ ಪಾಸಿಟಿವ್ ಬಂದಿರುವುದು ದೃಢಪಟ್ಟಿದೆ ಎಂದು ಜಿಲ್ಲಾಧಿಕಾರಿ ಎಸ್.ಎಸ್. ನಕುಲ್ ತಿಳಿಸಿದ್ದಾರೆ.

ABOUT THE AUTHOR

...view details