ಹೊಸಪೇಟೆ (ವಿಜಯನಗರ): ಬಸ್ ಮತ್ತು ಟಿಪ್ಪರ್ ಲಾರಿ ನಡುವೆ ಮುಖಾಮುಖಿ ಅಪಘಾತ ಸಂಭವಿಸಿದ ಪರಿಣಾಮ ಚಾಲಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಇಂಗಳಗಿ ಕ್ರಾಸ್ ಬಳಿ ನಡೆದಿದೆ.
ಟಿಪ್ಪರ್ ಲಾರಿ-ಬಸ್ ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮೂವರು ಗಂಭೀರ - ಹೊಸಪೇಟೆಯ ಇಂಗಳಗಿ ಕ್ರಾಸ್
ಹೊಸಪೇಟೆಯ ಇಂಗಳಗಿ ಕ್ರಾಸ್ ಬಳಿ ಬಸ್ ಹಾಗೂ ಟಿಪ್ಪರ್ ಲಾರಿ ಮುಖಾಮುಖಿ ಡಿಕ್ಕಿ ಹೊಡೆದಿದ್ದು ಓರ್ವ ಸ್ಥಳದಲ್ಲೇ ಸಾವನ್ನಪ್ಪಿದ್ದು, 13ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
![ಟಿಪ್ಪರ್ ಲಾರಿ-ಬಸ್ ಮುಖಾಮುಖಿ ಡಿಕ್ಕಿ: ಓರ್ವ ಸಾವು, ಮೂವರು ಗಂಭೀರ road accident](https://etvbharatimages.akamaized.net/etvbharat/prod-images/768-512-12888065-thumbnail-3x2-lek.jpg)
ಹೊಸಪೇಟೆ ತಾಲೂಕಿನ ವಡ್ರಹಳ್ಳಿಯ ಟಿಪ್ಪರ್ ಚಾಲಕ ಶಶಿಕುಮಾರ್ (22) ಮೃತ ದುರ್ದೈವಿ. ಕೆಎಸ್ಆರ್ಟಿಸಿ ಬಸ್ ಚಾಲಕ ಸೇರಿದಂತೆ ಮೂವರು ಪ್ರಯಾಣಿಕರ ಸ್ಥಿತಿ ಗಂಭೀರವಾಗಿದ್ದು, ಬಳ್ಳಾರಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಜೊತೆಗೆ 10ಕ್ಕೂ ಹೆಚ್ಚು ಪ್ರಯಾಣಿಕರನ್ನು ನಗರದ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.
ಹೊಸಪೇಟೆಯಿಂದ ಶ್ರೀಶೈಲಂ ಮಾರ್ಗವಾಗಿ ಹೋಗುತ್ತಿದ್ದ ಬಸ್ಗೆ ಬಳ್ಳಾರಿ ಕಡೆಯಿಂದ ಬಂದ ಟಿಪ್ಪರ್ ಲಾರಿ ಡಿಕ್ಕಿ ಹೊಡೆದಿದೆ. ಸ್ಥಳಕ್ಕೆ ಹೊಸಪೇಟೆಯ ಸಂಚಾರಿ ಮತ್ತು ಗ್ರಾಮೀಣ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಕುರಿತು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.