ಬಳ್ಳಾರಿ: ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ನಗರದ ಗಡಿಗಿ ಚನ್ನಪ್ಪ ವೃತ್ತದ ಬಳಿ ರೈತರು ಬೆಳೆದ ವಿವಿಧ ತರಕಾರಿ ರಸ್ತೆಗೆ ಚೆಲ್ಲುವ ಮೂಲಕ ಕೇಂದ್ರ ಸರ್ಕಾರದ ವಿರುದ್ದ ಆಕ್ರೋಶ ವ್ಯಕ್ತವಾಯಿತು.
ತರಕಾರಿ ರಸ್ತೆಗೆ ಚೆಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ - ಭಾರತ್ ಬಂದ್
ಬಳ್ಳಾರಿ ಗಡಿಗಿ ಚನ್ನಪ್ಪ ವೃತ್ತದಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಭತ್ತ, ಟೊಮೊಟೊ, ಕ್ಯಾಬೆಜ್, ಸೊಪ್ಪು ಸೇರಿದಂತೆ ವಿವಿಧ ತರಕಾರಿ ರಸ್ತೆಗೆ ಚೆಲ್ಲುವ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಲಾಯಿತು.
ತರಕಾರಿ ರಸ್ತೆಗೆ ಚೆಲ್ಲಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ
ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಜಿ.ಎಸ್.ಮಹಮ್ಮದ್ ರಫೀಕ್ ನೇತೃತ್ವದಲ್ಲಿ ಚನ್ನಪ್ಪ ವೃತ್ತಕ್ಕೆ ಆಗಮಿಸಿದ ಕಾಂಗ್ರೆಸ್ ಕಾರ್ಯಕರ್ತರು, ಭತ್ತ, ಟೊಮೆಟೊ, ಕ್ಯಾಬೆಜ್, ಸೊಪ್ಪು ಸೇರಿದಂತೆ ವಿವಿಧ ತರಕಾರಿ ರಸ್ತೆಗೆ ಚೆಲ್ಲಿದರು.
ಈ ವೇಳೆ ಹಿರಿಯ ಕಾಂಗ್ರೆಸ್ ಮುಖಂಡ ಕಲ್ಲುಕಂಭ ಪಂಪಾಪತಿ, ಕಾಂಗ್ರೆಸ್ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಅಸುಂಡಿ ನಾಗರಾಜಗೌಡ, ಜೆ.ಎಸ್.ಆಂಜನೇಯಲು, ಬಿ.ಎಂ.ಪಾಟೀಲ ಸೇರಿದಂತೆ ಹಲವರು ಇದ್ದರು.