ಬಳ್ಳಾರಿ: ಅಖಂಡ ಬಳ್ಳಾರಿ ಜಿಲ್ಲೆ ವಿಭಜನೆ ಖಂಡಿಸಿ ಇಂದು ಕನ್ನಡ ಪರ, ರೈತ ಸಂಘಟನೆಗಳು ಕರೆ ನೀಡಿದ್ದ ಹೋರಾಟಕ್ಕೆ ಜಿಲ್ಲಾ ಪೊಲೀಸ್ ಇಲಾಖೆ ಅಡ್ಡಿಪಡಿಸಿದೆ ಎನ್ನುವ ಆರೋಪ ಕೇಳಿಬಂದಿದೆ.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ತಾತ್ಕಾಲಿಕ ಟೆಂಟ್ ನಿರ್ಮಿಸಿಕೊಂಡು ನ್ಯಾಯಯುತವಾಗಿ ಹೋರಾಟ ಮಾಡುತ್ತಿದ್ದಾಗ ಬ್ರೂಸ್ ಪೇಟೆಯ ಸಿಪಿಐ ನಾಗರಾಜ ನೇತೃತ್ವದ ಪೊಲೀಸ್ ಸಿಬ್ಬಂದಿ ತಂಡ ತಾಡಪಾಲ್ ಅನ್ನು ಕಿತ್ತುಕೊಂಡು ಬಂದಿದ್ದಾರೆ ಎಂದು ಕಾರ್ಯಕರ್ತರು ಆರೋಪಿಸಿದ್ದು, ಬ್ರೂಸ್ ಪೇಟೆ ಠಾಣೆ ಎದುರು ಕೆಲಕಾಲ ಘೋಷಣೆ ಕೂಗಿ ಪೊಲೀಸರ ವರ್ತನೆಯನ್ನು ಖಂಡಿಸಿದರು.