ಬಳ್ಳಾರಿ: ಜಿಲ್ಲೆಯಲ್ಲಿ ಬಿಸಿಲಿನ ತಾಪಕ್ಕೆ ಜನರು ತತ್ತರಿಸಿ ಹೋಗಿದ್ದು, ನವಜಾತ ಶಿಶುಗಳು ಹಾಗೂ ಗರ್ಭಿಣಿಯರ ಆರೋಗ್ಯದ ಮೇಲೂ ವ್ಯತಿರಿಕ್ತ ಪರಿಣಾಮ ಬೀರುತ್ತಿದೆ.
ಹೌದು.., ಜಿಲ್ಲೆಯ ಪ್ರತಿಯೊಂದು ನವಜಾತ ಶಿಶುಗಳು ಹಾಗೂ ಗರ್ಭಿಣಿಯರು ನಿರ್ಜಲೀಕರಣ ಸಮಸ್ಯೆಯಿಂದ ಬಳಲುತ್ತಿದ್ದು, ಜಿಲ್ಲಾ ಸರ್ಕಾರಿ ಆಸ್ಪತ್ರೆ ಹಾಗೂ ವಿಜಯ ನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ ಆಸ್ಪತ್ರೆಗೆ (ವಿಮ್ಸ್) ಪ್ರತಿ ದಿನ ದಾಖಲಾಗುತ್ತಿದ್ದಾರೆ.
ಕಳೆದ ವರ್ಷ ಮಾರ್ಚ್ ತಿಂಗಳಲ್ಲೂ ನಿರ್ಜಲೀಕರಣ ಸಮಸ್ಯೆಯಿಂದ 80ಕ್ಕೂ ಅಧಿಕ ಗರ್ಭಿಣಿಯರು, ನವಜಾತ ಶಿಶುಗಳು ಆಸ್ಪತ್ರೆಗೆ ದಾಖಲಾಗಿದ್ದರು. ಕಳೆದ ಏಪ್ರಿಲ್ ತಿಂಗಳಲ್ಲಿ ಕೂಡ 70 ಮಂದಿ ಈ ಸಮಸ್ಯೆಯಿಂದ ಬಳಲುತ್ತಿರುವ ಕುರಿತು ವರದಿಯಾಗಿದೆ. ದೇಹದಲ್ಲಿ ನೀರಿನ ಅಂಶ ಕಡಿಮೆ ಆಗುವುದರಿಂದ ಗರ್ಭಿಣಿಯರು ಹೃದ್ರೋಗ ಸೇರಿದಂತೆ ಇತರೆ ಗಂಭೀರ ಸ್ವರೂಪದ ಕಾಯಿಲೆಯಿಂದ ಬಳಲುತ್ತಾರೆ ಎಂದು ಶಸ್ತ್ರ ಚಿಕಿತ್ಸಕ ಡಾ. ಎನ್.ಬಸರೆಡ್ಡಿ ಈಟಿವಿ ಭಾರತ್ಗೆ ತಿಳಿಸಿದರು.