ಬಳ್ಳಾರಿ: ಜಿಲ್ಲೆಯ ಹೂವಿನಹಡಗಲಿ ಪಟ್ಟಣದಲ್ಲಿಂದು ಖಾಸಗಿ ಶಾಲಾ ವಾಹನವೊಂದು ಏಕಾಏಕಿ ಪಲ್ಟಿ ಹೊಡೆದ ಪರಿಣಾಮ ಐವರು ಮಕ್ಕಳಿಗೆ ಗಾಯಗಳಾದ ಘಟನೆ ನಡೆದಿದೆ.
ಖಾಸಗಿ ಶಾಲಾ ವಾಹನ ಪಲ್ಟಿ: ಐವರು ಮಕ್ಕಳಿಗೆ ಗಾಯ - ಹೂವಿನಹಡಗಲಿ ಪಟ್ಟಣದ ರಸ್ತೆ ಅಪಘಾತ ನ್ಯೂಸ್
ಬಳ್ಳಾರಿ ಜಿಲ್ಲೆಯ ಹೂವಿನಹಡಗಲಿ ಪಟ್ಟಣದಲ್ಲಿಂದು ಖಾಸಗಿ ಶಾಲಾ ವಾಹನವೊಂದು ಏಕಾಏಕಿ ಪಲ್ಟಿ ಹೊಡೆದ ಪರಿಣಾಮ ಐವರು ಮಕ್ಕಳಿಗೆ ಗಾಯಗಳಾದ ಘಟನೆ ನಡೆದಿದೆ.

accident
ಹೂವಿನಹಡಗಲಿ ಪಟ್ಟಣದಲ್ಲಿ ರಸ್ತೆ ಅಪಘಾತ
ಜಿಲ್ಲೆಯ ಹಡಗಲಿ ಪಟ್ಟಣದ ಜೆಎಸ್ಎಸ್ ಪಬ್ಲಿಕ್ ಶಾಲಾ ವಾಹನವು ಹೊಸಪೇಟೆ ರಸ್ತೆ ಮಾರ್ಗವಾಗಿ ಸಂಚರಿಸುತ್ತಿದ್ದ ವೇಳೆ ದಿಢೀರನೇ ಪಲ್ಟಿಯಾಗಿದ್ದು, ವಾಹನದಲ್ಲಿದ್ದ 20 ಮಕ್ಕಳ ಪೈಕಿ ಐವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಗಾಯಗಳನ್ನು ಹೂವಿನಹಡಗಲಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಚಾಲಕನ ಅತೀ ವೇಗವೇ ಈ ಅಪಘಾತಕ್ಕೆ ಕಾರಣವೆಂದು ಹೇಳಲಾಗುತ್ತಿದ್ದು, ಹಡಗಲಿ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕಾಗಮಿಸಿ ಪರಿಶೀಲನೆ ನಡೆಸಿದ್ದಾರೆ.