ಬಳ್ಳಾರಿ: ನೋಟಿಸ್ ನೀಡದೆ ಆಶಾ ಕಾರ್ಯಕರ್ತೆ ರಾಮಕ್ಕ ಎನ್ನುವರನ್ನು ಕೆಲಸದಿಂದ ವಜಾಗೊಳಿಸಿರುವುದನ್ನು ವಿರೋಧಿಸಿ ನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಇಂದು ಕರ್ನಾಟಕ ರಾಜ್ಯ ಆಶಾ ಸಂಯುಕ್ತ ಕಾರ್ಯಕರ್ತೆಯರ ಸಂಘದಿಂದ ಪ್ರತಿಭಟನೆ ನಡೆಸಲಾಯಿತು.
ಬಳ್ಳಾರಿ: ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ - Asha activists
ಬ್ರೂಸಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ವಾರ್ಡ್ ನಂಬರ್ 32ರಲ್ಲಿ ಕೆಲಸ ಮಾಡುತ್ತಿದ್ದ ಆಶಾ ಕಾರ್ಯಕರ್ತೆ ರಾಮಕ್ಕ ಅವರಿಗೆ ನೋಟಿಸ್ ನೀಡದೆ ಕೆಲಸದಿಂದ ವಜಾ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಲಾಯಿತು.
![ಬಳ್ಳಾರಿ: ಆಶಾ ಕಾರ್ಯಕರ್ತೆಯರಿಂದ ಪ್ರತಿಭಟನೆ ಆಶಾ ಕಾರ್ಯಕರ್ತೆಯರ ಪ್ರತಿಭಟನೆ](https://etvbharatimages.akamaized.net/etvbharat/prod-images/768-512-9924714-thumbnail-3x2-lek.jpg)
ಈ ಕುರಿತು ಈಟಿವಿ ಭಾರತದೊಂದಿಗೆ ಮಾತನಾಡಿದ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ರಾಜ್ಯ ಕಾರ್ಯದರ್ಶಿ ಡಿ.ನಾಗಲಕ್ಷ್ಮಿ, ಬ್ರೂಸಪೇಟೆ ಪ್ರಾಥಮಿಕ ಆರೋಗ್ಯ ಕೇಂದ್ರದ ವ್ಯಾಪ್ತಿಗೆ ಬರುವ ವಾರ್ಡ್ ನಂಬರ್ 32ರಲ್ಲಿ ಆಶಾ ಕಾರ್ಯಕರ್ತೆ ರಾಮಕ್ಕ ಅವರು ಕಳೆದ 4 ವರ್ಷಗಳಿಂದ ಕೆಲಸ ಮಾಡುತ್ತಾ ಬಂದಿದ್ದಾರೆ. ಏಕಾಏಕಿ ನೋಟಿಸ್ ಸಹ ನೀಡದೆ ಅವರನ್ನು ಕೆಲಸದಿಂದ ವಜಾ ಮಾಡಿದ್ದಾರೆ ಎಂದು ಆರೋಪಿಸಿದರು.
ಕೆಲಸ ಸರಿಯಾಗಿ ಮಾಡಿಲ್ಲ ಎನ್ನುವ ಕಾರಣದಿಂದ ವಜಾ ಮಾಡಲಾಗಿದೆ ಎಂದು ಹೇಳುತ್ತಿದ್ದಾರೆ. ಆದ್ರೆ ವಜಾ ಮಾಡಿರುವ ಕ್ರಮವು ಸಂಪೂರ್ಣವಾಗಿ ನಿಯಮ ಬಾಹಿರವಾಗಿದೆ. ಆಶಾ ಕಾರ್ಯಕರ್ತೆ ಸರಿಯಾಗಿ ಕಾರ್ಯನಿರ್ವಹಿಸಿಲ್ಲವೆಂದರೆ 3 ಬಾರಿ ನೋಟಿಸ್ ಕೊಡಬೇಕೆಂದು ಸರ್ಕಾರದ ಆದೇಶವಿದೆ. ರಾಮಕ್ಕನಿಗೆ ಯಾವುದೇ ನೋಟಿಸ್ ನೀಡದೆ ವಜಾ ಮಾಡಲಾಗಿದೆ. ರಾಮಕ್ಕನನ್ನು ಮತ್ತೆ ಕೆಲಸಕ್ಕೆ ಸೇರಿಸಿಕೊಳ್ಳಬೇಕು ಎಂದು ಒತ್ತಾಯಿಸಿದರು.