ಹೊಸಪೇಟೆ: ಪೌರತ್ವ ತಿದ್ದುಪಡಿ ಬಿಲ್ ವಾಪಾಸ್ ಪಡೆದುಕೊಳ್ಳಬೇಕು ಎಂದು ಕಾಂಗ್ರೆಸ್ ಪಕ್ಷದ ಮುಖಂಡ ನಿಯಾಜ ಹೆಚ್.ಎನ್ ಮೊಹಮ್ಮದ್ ಇಮಾಮ್ ನಿಯಾಜ್ ಒತ್ತಾಯಿಸಿದರು.
ಹೊಸಪೇಟೆಯಲ್ಲಿ ಮುಸ್ಲಿಂಮರ ಪ್ರತಿಭಟನೆ ಕೇಂದ್ರ ಸರ್ಕಾರವು ಸಂವಿಧಾನ ವಿರೋಧಿಯಾಗಿದೆ. ದೇಶದಲ್ಲಿರುವ ಸಮಾಜಿಕ ಸಾಮರಸ್ಯ, ಸಾಮಾಜಿಕ ಕಳಕಳಿಯನ್ನು ಹಾಳು ಮಾಡುತ್ತಿದೆ. ಪೌರತ್ವ ತಿದ್ದುಪಡಿ ಕಾಯ್ದೆಯು ಸಂವಿಧಾನ ವಿರುದ್ಧವಾಗಿದೆ ಎಂದು ಇಂದು ನಗದಲ್ಲಿ ಅಂಜುಮಾನ್ ಸಂಘ, ದಲಿಪರ ಸಂಘಟನೆಗಳು ಹಾಗೂ ಪ್ರಗತಿ ಪರ ಸಂಘಟನೆಗಳು ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಪಾದಯಾತ್ರೆ ಕೈಗೊಳ್ಳಲಾಯಿತು.
ಕೇಂದ್ರದಲ್ಲಿರುವ ಭಾರತೀಯ ಜನತಾ ಪಕ್ಷದವರು ಮುಸ್ಲಿಂ ಧರ್ಮದರಿಗೆ ಅನ್ಯಾಯ ಮಾಡುತ್ತಿದ್ದಾರೆ. ಅಲ್ಪ ಸಂಖ್ಯಾತರಲ್ಲಿ ಬರುವ ಮುಸ್ಲಿಂ ಧರ್ಮದ ಜನರನ್ನು ಹತ್ತಿಕ್ಕುವ ಕೆಲಸವನ್ನು ಮಾಡುತ್ತಿದೆ. ದೇಶಕ್ಕಾಗಿ ಮುಸ್ಲಿಂ ಧರ್ಮದವರು ದುಡಿದಿದ್ದಾರೆ. ಆದರೆ ಪ್ರಧಾನಿ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಅನ್ಯಾಯ ಮಾಡುತ್ತಿದ್ದಾರೆ ಎಂದು ನಿಯಾಜ ಹೆಚ್.ಎನ್ ಮೊಹಮ್ಮದ್ ಇಮಾಮ್ ನಿಯಾಜ್ ಅಸಮಧಾನವನ್ನು ವ್ಯಕ್ತಪಡಿಸಿದರು.
ಈ ಪೌರತ್ವ ತಿದ್ದುಪಡಿ ಮುಸ್ಲಿಂ ಧರ್ಮದ ಆಸೆ ಮತ್ತು ಭಾವನೆಗಳಿಗೆ ಧಕ್ಕೆಯನ್ನು ಉಂಟು ಮಾಡುತ್ತಿದೆ. ಭಾರತೀಯ ಜನತಾ ಪಕ್ಷದವರು ಉದ್ದೇಶ ಪೂರ್ವಕವಾಗಿ ಮುಸ್ಲಿಂ ಧರ್ಮದವರಿಗೆ ಪೌರತ್ವ ತಿದ್ದುಪಡಿಯನ್ನು ಮಾಡುವುದು ಎಷ್ಟು ಸರಿ. ಈ ಕಾಯ್ದೆ ದೇಶದ ಜನರಿಗೆ ಅವಶ್ಯಕತೆ ಇಲ್ಲ. ಆದ್ದರಿಂದ ಕೇಂದ್ರ ಸರ್ಕಾರ ಇದನ್ನು ರದ್ದು ಪಡಿಸಬೇಕು ಎಂದು ಮನವಿ ಮಾಡಿಕೊಂಡರು.