ಕರ್ನಾಟಕ

karnataka

ETV Bharat / city

ಬಳ್ಳಾರಿ ಜಿಲ್ಲೆಯ ವಿವಿಧ ಜಾತ್ರಾ ಮಹೋತ್ಸವಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧ - ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ

ಕೋವಿಡ್-19 ಹಿನ್ನೆಲೆ, ಬಳ್ಳಾರಿ ಜಿಲ್ಲೆಯಲ್ಲಿ ಮಾರ್ಚ್​ ತಿಂಗಳಿನಲ್ಲಿ ನಡೆಯುವ ವಿವಿಧ ಜಾತ್ರಾ ಮಹೋತ್ಸವಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಡಿಸಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ. ಸದರಿ ದೇವಸ್ಥಾನಗಳ ಆಡಳಿತ ಮಂಡಳಿಯವರು ದೇವಸ್ಥಾನಗಳಲ್ಲಿ ಕೋವಿಡ್-19 ಮಾರ್ಗಸೂಚಿ ಅನ್ವಯ ಮುಂಜಾಗ್ರತಾ ಕ್ರಮ ವಹಿಸಿ, ನಿತ್ಯದ ಪೂಜಾ ಧಾರ್ಮಿಕ ವಿಧಿ - ವಿಧಾನಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ.

District Collector Pavanakumar Malapati
ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ

By

Published : Mar 3, 2021, 9:05 AM IST

ಬಳ್ಳಾರಿ:ಕೋವಿಡ್-19 ಹಿನ್ನೆಲೆ, ಸಾರ್ವಜನಿಕರು ಮತ್ತು ಭಕ್ತಾದಿಗಳ ಆರೋಗ್ಯದ ಹಿತದೃಷ್ಟಿಯಿಂದ ಜಿಲ್ಲೆಯಲ್ಲಿ ಮಾರ್ಚ್​ ತಿಂಗಳಿನಲ್ಲಿ ನಡೆಯುವ ವಿವಿಧ ಜಾತ್ರಾ ಮಹೋತ್ಸವಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಆದೇಶ ಹೊರಡಿಸಿದ್ದಾರೆ.

ಮಾ.3 ರಿಂದ 8ರವರೆಗೆ ಕೊಟ್ಟೂರಿನಲ್ಲಿ ನಡೆಯುವ ಶ್ರೀ ಗುರುಬಸವೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರಾ ಮಹೋತ್ಸವ, ಮಾ.5ರಂದು ನಡೆಯುವ ಬಳ್ಳಾರಿ ತಾಲೂಕು ಮೋಕಾ ಗ್ರಾಮದ ಶ್ರೀ ಮಲ್ಲೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಮಹೋತ್ಸವದ ರಥೋತ್ಸವ ಹಾಗೂ ಮಾ. 25ರಂದು ನಡೆಯುವ ಹರಪನಹಳ್ಳಿ ತಾಲೂಕಿನ ಕೂಲಹಳ್ಳಿ ಗ್ರಾಮದ ಶ್ರೀ ಗೋಣಿ ಬಸವೇಶ್ವರ ಸ್ವಾಮಿ ದೇವಸ್ಥಾನದ ವಾರ್ಷಿಕ ಜಾತ್ರೆಯ ರಥೋತ್ಸವಕ್ಕೆ ಸಾರ್ವಜನಿಕರ ಪ್ರವೇಶ ನಿಷೇಧಿಸಲಾಗಿದೆ.

ಸದರಿ ದೇವಸ್ಥಾನಗಳ ಆಡಳಿತ ಮಂಡಳಿಯವರು ದೇವಸ್ಥಾನಗಳಲ್ಲಿ ಕೋವಿಡ್-19 ಮಾರ್ಗಸೂಚಿ ಅನ್ವಯ ಮುಂಜಾಗ್ರತಾ ಕ್ರಮ ವಹಿಸಿ, ನಿತ್ಯದ ಪೂಜಾ ಧಾರ್ಮಿಕ ವಿಧಿ - ವಿಧಾನಗಳನ್ನು ನಿರ್ವಹಿಸಲು ಅನುಮತಿ ನೀಡಲಾಗಿದೆ.

ಜಾತ್ರಾ ಪ್ರದೇಶದಲ್ಲಿ, ರಸ್ತೆಯ ಬದಿಗಳಲ್ಲಿ, ಜಮೀನುಗಳಲ್ಲಿ ಯಾವುದೇ ವಾಣಿಜ್ಯ ಚಟುವಟಿಕೆಗಳನ್ನು ನಡೆಸಲು ಅವಕಾಶ ಇರುವುದಿಲ್ಲ. ಆದೇಶ ಉಲ್ಲಂಘಿಸಿದವರಿಗೆ ವಿಪತ್ತು ನಿರ್ವಹಣಾ ಕಾಯ್ದೆ 2005 ಹಾಗೂ ಭಾರತೀಯ ದಂಡ ಸಂಹಿತೆ 188 ರ ಪ್ರಕಾರ ಕ್ರಮ ಜರುಗಿಸಲಾಗುವುದು ಎಂದು ಡಿಸಿ ಎಚ್ಚರಿಸಿದ್ದಾರೆ.

ಓದಿ:ಬಿಜೆಪಿ ಸಂಸದ ಪುತ್ರನ ಮೇಲೆ ರಾತ್ರೋರಾತ್ರಿ ಗುಂಡಿನ ದಾಳಿ!

ಸದರಿ ದೇವಸ್ಥಾನದ ಆಡಳಿತ ಮಂಡಳಿಗಳು, ಜಿ.ಪಂ ಸಿಇಒ, ಜಿಲ್ಲಾ ಪೊಲೀಸ್ ಅಧೀಕ್ಷಕರು, ಹೂವಿನಹಡಗಲಿ ಉಪವಿಭಾಗಾಧಿಕಾರಿಗಳು, ತಹಶೀಲ್ದಾರರು, ಧಾರ್ಮಿಕ ದತ್ತಿ ಇಲಾಖೆಯ ಸಹಾಯಕ ಆಯುಕ್ತರು ಮತ್ತು ಸಂಬಂಧಪಟ್ಟ ಅಧಿಕಾರಿಗಳು ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚನೆ ನೀಡಿದ್ದಾರೆ.

ABOUT THE AUTHOR

...view details