ಕರ್ನಾಟಕ

karnataka

ETV Bharat / city

ಬಳ್ಳಾರಿಯಲ್ಲಿ ಮಳೆ ಅವಾಂತರ : ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಸೋಮಶೇಖರ ರೆಡ್ಡಿ ಭೇಟಿ - ಮಳೆ ಅವಾಂತರ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಸೋಮಶೇಖರ ರೆಡ್ಡಿ ಭೇಟಿ

ನಿನ್ನೆ ರಾತ್ರಿ ಸುರಿದ ಆಲಿಕಲ್ಲು ಮಳೆಗೆ ಬಿಸಿಲ ನಗರಿ ಬಳ್ಳಾರಿ ತತ್ತರಿಸಿದೆ. ನಗರ ಶಾಸಕ ಸೋಮಶೇಖರ ರೆಡ್ಡಿ ಬೆಳ್ಳಂಬೆಳ್ಳಗೆ ಸಿಟಿ ‌ರೌಂಡ್ ಶುರು ಮಾಡಿದ್ದಾರೆ. ಮಳೆಯಿಂದ ಹಾನಿಗೊಳಗಾದ ಪ್ರದೇಶಕ್ಕೆ ಭೇಟಿ ನೀಡುತ್ತಿರುವ ಶಾಸಕರಿಗೆ ಆಯಾ ವಾರ್ಡಿನ ಪಾಲಿಕೆ ಸದಸ್ಯರು ಸಾಥ್ ನೀಡಿದರು..

MLA Somashekar Reddy visits Bellary
ಮಳೆ ಅವಾಂತರ: ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಸೋಮಶೇಖರ ರೆಡ್ಡಿ ಭೇಟಿ

By

Published : Jun 3, 2022, 2:02 PM IST

ಬಳ್ಳಾರಿ :ನಗರದಲ್ಲಿ ನಿನ್ನೆ (ಗುರುವಾರ) ರಾತ್ರಿ ಸುರಿದ ಭಾರೀ ಮಳೆಗೆ ತಗ್ಗು ಪ್ರದೇಶಗಳಲ್ಲಿ ನೀರು ನುಗ್ಗಿದೆ. 100ಕ್ಕೂ ಹೆಚ್ಚು ಮರ ಹಾಗೂ ವಿದ್ಯುತ್ ಕಂಬಗಳು ಬಿದ್ದು ಆತಂಕ ಸೃಷ್ಟಿಸಿದೆ. ಮಳೆ ನೀರು ನುಗ್ಗಿ ಅಪಾರ ಪ್ರಮಾಣದಲ್ಲಿ ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಸೋಮಶೇಖರ ರೆಡ್ಡಿ ಭೇಟಿ ನೀಡಿ ಪರಿಶೀಲಿಸಿದರು.

ಮಳೆ ಅವಾಂತರ : ಹಾನಿಗೊಳಗಾದ ಪ್ರದೇಶಗಳಿಗೆ ಶಾಸಕ ಸೋಮಶೇಖರ ರೆಡ್ಡಿ ಭೇಟಿ..

ಮನೆಗಳಿಗೆ ನೀರು ನುಗ್ಗಿದ್ದರಿಂದ ಅಲ್ಲಿನ ನಿವಾಸಿಗಳು ರಾತ್ರಿಯೆಲ್ಲ ಜಾಗರಣೆ ಮಾಡಿದರು. ನಗರದ ಬಹುತೇಕ ಕಡೆಗಳಲ್ಲಿ ವಿದ್ಯುತ್​​ ಸಂಪರ್ಕ ಕಡಿತಗೊಂಡಿದೆ. ಅಲ್ಲಲ್ಲಿ ಮನೆಗಳ ಮೇಲೆ, ವಾಹನಗಳ ಮೇಲೆ ಮರಗಳು ಬಿದ್ದಿವೆ. ಸಂಗನಕಲ್ಲು ರಸ್ತೆಯ ನಿರ್ಮಾಣ ಹಂತದಲ್ಲಿರುವ ದೇವಸ್ಥಾನದ ಗೋಪುರಕ್ಕೆ ಸಿಡಿಲು‌ ಬಡಿದಿದೆ.

ಎಸ್​ಎನ್​​ ಪೇಟ್, ಮಾರುತಿ ಕಾಲೋನಿ, ಹನುಮಾನ ನಗರ ಸೇರಿದಂತೆ ಹಲವೆಡೆ ಭೇಟಿ ನೀಡಿದ ನಗರ ಶಾಸಕ ಸೋಮಶೇಖರ್ ರೆಡ್ಡಿ, ಕಾರ್ಪೊರೇಟರ್​​ಗಳ‌ ಜತೆಗೆ ಜನರ ಸಮಸ್ಯೆ ಆಲಿಸಿದರು.

ರಸ್ತೆಗೆ ಅಡ್ಡಲಾಗಿ ಬಿದ್ದ ಮರಗಳ ತೆರವು, ವಿದ್ಯುತ್ ಕಂಬಗಳನ್ನ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚಸಿದರು. ಭಾರಿ ಮಳೆಯಿಂದಾಗಿ ಎಸ್​ಎನ್​​ ಪೇಟ್ ಅಂಡರ್‌ಪಾಸ್​​ನಲ್ಲಿ ನೀರು ನಿಂತಿದ್ದು, ವಾಹನ ಸಂಚಾರ ಬಂದ್ ಆಗಿದೆ.

ABOUT THE AUTHOR

...view details