ಬಳ್ಳಾರಿ: ಜಾಮೀನಿನ ಮೇಲೆ ಜೈಲಿನಿಂದ ಹೊರಬಂದಿದ್ದ ರೌಡಿಶೀಟರ್ನೋರ್ವನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹತ್ಯೆ ಮಾಡಿ ಪರಾರಿಯಾಗಿರುವ ಘಟನೆ ಬಳ್ಳಾರಿಯ ಹಾವಂಭಾವಿ ಪ್ರದೇಶದಲ್ಲಿ ಭಾನುವಾರ ರಾತ್ರಿ ನಡೆದಿದೆ. ಮಹೇಂದ್ರ (34) ಕೊಲೆಯಾದವನು.
ಹತ್ಯೆಗೀಡಾದ ಮಹೇಂದ್ರ, ತಾಂಡಾ ರಮೇಶ ಎಂಬಾತನ ಕೊಲೆ ಪ್ರಕರಣದ ಆರೋಪಿಯಾಗಿದ್ದು, ಇತ್ತಿಚೆಗಷ್ಟೇ ಜೈಲಿನಿಂದ ಹೊರ ಬಂದಿದ್ದ. ಈ ಹಿಂದೆಯೇ ಮೂರು ಬಾರಿ ಮಹೇಂದ್ರನ ಕೊಲೆಗೆ ಯತ್ನಿಸಲಾಗಿತ್ತು. ನಿನ್ನೆ ರಾತ್ರಿ ಮನೆಗೆ ತೆರಳುತ್ತಿದ್ದ ವೇಳೆ ಹಾವಂಭಾವಿ ಪ್ರದೇಶದಲ್ಲಿ ಅಡ್ಡಗಟ್ಟಿದ 20ಕ್ಕೂ ಹೆಚ್ಚು ದುಷ್ಕರ್ಮಿಗಳು, ಮಹೇಂದ್ರನ ಮೇಲೆ ಏಕಾಏಕಿ ಮಾರಕಾಸ್ತ್ರಗಳಿಂದ ದಾಳಿ ಮಾಡಿ ಭೀಕರವಾಗಿ ಹತ್ಯೆ ಮಾಡಿದ್ದಾರೆ.