ಬಳ್ಳಾರಿ: ಜಿಲ್ಲೆಯ 6 ತಾಲೂಕುಗಳಲ್ಲಿ ನಾಳೆ ಎರಡನೇ ಹಂತದ ಗ್ರಾಪಂ ಚುನಾವಣೆ ನಡೆಯುತ್ತಿರುವ ಹಿನ್ನೆಲೆ ಮತಗಟ್ಟೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ ಮಾಡಿ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಆದೇಶ ಹೊರಡಿಸಿದ್ದಾರೆ.
ನಾಳೆ 2ನೇ ಹಂತದ ಗ್ರಾಪಂ ಚುನಾವಣೆ : ಮತಗಟ್ಟೆ ಕೇಂದ್ರಗಳ ಸುತ್ತ ನಿಷೇಧಾಜ್ಞೆ ಜಾರಿ - section 144 implemented around booths at bellary
ಮತಗಟ್ಟೆ ಕೇಂದ್ರಗಳಲ್ಲಿ ಕೇವಲ ಅಧಿಕಾರಿಗಳನ್ನು ಹೊರತುಪಡಿಸಿ ಅಭ್ಯರ್ಥಿಗಳು, ಏಜೆಂಟರು/ಸಾರ್ವಜನಿಕರು ಮತಗಟ್ಟೆಯ ಸುತ್ತಮುತ್ತ 100 ಮೀಟರ್ ಒಳಗೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ..
ಜಿಲ್ಲೆಯ 6 ತಾಲೂಕುಗಳಲ್ಲಿ ನಾಳೆ ಎರಡನೇ ಹಂತದ ಗ್ರಾಪಂ ಚುನಾವಣೆ ನಡೆಯಲಿದೆ. ಚುನಾವಣೆ ನಡೆಯುವ ಎಲ್ಲಾ ಗ್ರಾಪಂ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆ ಕೇಂದ್ರಗಳ ಸುತ್ತಮುತ್ತ 100 ಮೀಟರ್ ವ್ಯಾಪ್ತಿಯಲ್ಲಿ ಮೊಬೈಲ್, ಸ್ಮಾರ್ಟ್ ವಾಚ್ ಹಾಗೂ ಇತರೇ ಎಲೆಕ್ಟ್ರಾನಿಕ್ ಉಪಕರಣಗಳನ್ನು ಉಪಯೋಗಿಸದಂತೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಗಳಾಗಿರುವ ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಅವರು ಆದೇಶ ಹೊರಡಿಸಿದ್ದಾರೆ.
ಮತಗಟ್ಟೆ ಕೇಂದ್ರಗಳಲ್ಲಿ ಕೇವಲ ಅಧಿಕಾರಿಗಳನ್ನು ಹೊರತುಪಡಿಸಿ ಅಭ್ಯರ್ಥಿಗಳು, ಏಜೆಂಟರು/ಸಾರ್ವಜನಿಕರು ಮತಗಟ್ಟೆಯ ಸುತ್ತಮುತ್ತ 100 ಮೀಟರ್ ಒಳಗೆ ಎಲೆಕ್ಟ್ರಾನಿಕ್ ಉಪಕರಣಗಳನ್ನು ತೆಗೆದುಕೊಂಡು ಹೋಗುವುದನ್ನು ಸಂಪೂರ್ಣ ನಿಷೇಧಿಸಲಾಗಿದೆ ಎಂದು ಅವರು ತಿಳಿಸಿದ್ದಾರೆ.