ಕೊಟ್ಟೂರು (ಬಳ್ಳಾರಿ): ತಾಲೂಕಿನಾದ್ಯಂತ ಕೊವಿಡ್-19 ಪ್ರಕರಣಗಳು ಹೆಚ್ಚಾದ ಹಿನ್ನೆಲೆ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್ ಮಾಡಲಾಗಿದೆ.
ಕೋವಿಡ್ ವಿರುದ್ಧ ಹೋರಾಟ: ಕೊಟ್ಟೂರಿನಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್ಗೆ ಬೆಂಬಲ - ಕೊಟ್ಟೂರು ಲಾಕ್ಡೌನ್
ಗಣಿನಾಡು ಬಳ್ಳಾರಿ ಜಿಲ್ಲೆಯ ಕೊಟ್ಟೂರು ಪಟ್ಟಣ ಸೇರಿ ತಾಲೂಕಿನಲ್ಲಿ 30ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ದಾಖಲಾದ ಹಿನ್ನೆಲೆ ಪಟ್ಟಣದಲ್ಲಿ ಸ್ವಯಂ ಪ್ರೇರಿತ ಲಾಕ್ ಡೌನ್ ಮಾಡಲಾಗಿದೆ.
ಸ್ವಯಂ ಪ್ರೇರಿತ ಲಾಕ್ ಡೌನ್ಗೆ ಪಟ್ಟಣದ ವರ್ತಕರು, ಬೆಳೆಗ್ಗೆ 7 ಗಂಟೆಯಿಂದ ಮದ್ಯಾಹ್ನ 2 ಗಂಟೆವರೆಗೆ ಅಂಗಡಿ ಮುಂಗಟ್ಟುಗಳನ್ನು ತೆರೆದು ನಂತರ ಸ್ವಯಂ ಪ್ರೇರಿತರಾಗಿ ಅಂಗಡಿಗಳನ್ನು ಮುಚ್ಚುವ ಮೂಲಕ ಬಹುತೇಕವಾಗಿ ಬೆಂಬಲ ವ್ಯಕ್ತಪಡಿಸಿದ್ದಾರೆ. ಹಳ್ಳಿಗಳಿಂದ ಬಂದಂತಹ ಜನತೆಗೆ ಸ್ವಯಂ ಪ್ರೇರಿತ ಲಾಕ್ ಡೌನ್ ನಿಂದ ಬೇಸರವಾಯಿತಾದರು ಕೊಟ್ಟೂರಿನ ಜನರ ನಿಲುವಿಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಲಾಕ್ ಡೌನ್ ಮಾಡಿ ಎಂದು ಯಾರನ್ನು ಒತ್ತಾಯಿಸದೆ ಇದ್ದರು, ಜನರೇ ತಮ್ಮ ಆರೋಗ್ಯದ ಹಿತ ದೃಷ್ಠಿಯಿಂದ ಸ್ವಯಂ ಪ್ರೇರಿತ ಲಾಕ್ ಡೌನ್ ವಿಧಿಕೊಂಡಿರುವುದಕ್ಕೆ ತಾಲೂಕು ಆಡಳಿತ, ಪೊಲೀಸ್ ಇಲಾಖೆ, ಆರೊಗ್ಯ ಇಲಾಖೆ ಸಂತಸ ವ್ಯಕ್ತ ಪಡಿಸಿದೆ.