ಕರ್ನಾಟಕ

karnataka

ETV Bharat / city

ವಿಜಯನಗರ ಜಿಲ್ಲೆಯಲ್ಲಿ ಕಲುಷಿತ ನೀರು ಕುಡಿದ ಪ್ರಕರಣ: ಸಾವಿನ ಸಂಖ್ಯೆ 6ಕ್ಕೆ ಏರಿಕೆ - ಹೂವಿನ ಹಡಗಲಿ ತಾಲೂಕಿನ ಮಕರಬ್ಬಿ

ವಿಜಯನಗರ ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಂಡ ಪ್ರಕರಣದಲ್ಲಿ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಈ ಬಗ್ಗೆ ತಾಲೂಕು ವೈದ್ಯಾಧಿಕಾರಿ ಡಾ.ವಿನೋದ್​ ಕುಮಾರ ಮಾಹಿತಿ ನೀಡಿದ್ದಾರೆ.

ತಾಲೂಕು ವೈದ್ಯಾಧಿಕಾರಿ ಡಾ.ವಿನೋದ್​ ಕುಮಾರ
ತಾಲೂಕು ವೈದ್ಯಾಧಿಕಾರಿ ಡಾ.ವಿನೋದ್​ ಕುಮಾರ

By

Published : Oct 4, 2021, 3:46 PM IST

ಹೊಸಪೇಟೆ (ವಿಜಯನಗರ): ಜಿಲ್ಲೆಯ ಹೂವಿನ ಹಡಗಲಿ ತಾಲೂಕಿನ ಮಕರಬ್ಬಿಯಲ್ಲಿ ಕಲುಷಿತ ನೀರು ಕುಡಿದು ಗ್ರಾಮಸ್ಥರು ಅಸ್ವಸ್ಥಗೊಂಡ ಪ್ರಕರಣದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ತಾಲೂಕು ವೈದ್ಯಾಧಿಕಾರಿ ಡಾ.ವಿನೋದ್​ ಕುಮಾರ

ಇದನ್ನೂ ಓದಿ:ವಿಜಯನಗರ: ಕಲುಷಿತ ನೀರು ಸೇವನೆ ಪ್ರಕರಣ.. ಸಾವಿನ ಸಂಖ್ಯೆ ಮೂರಕ್ಕೆ ಏರಿಕೆ

ಲಕ್ಷ್ಮಮ್ಮ, ಹಾವನೂರು ಬಸಮ್ಮ, ಬೆಳವಿಗಿ ನೀಲಪ್ಪ, ಗೋಣೆಪ್ಪ, ಮಹದೇವಪ್ಪ, ಕೆಂಚಮ್ಮ ವಾಂತಿ ಭೇದಿಯಿಂದ ಮೃತಪಟ್ಟಿದ್ದಾರೆ. ಕಳೆದ 20 ದಿನಗಳ ಹಿಂದೆ ಕಲುಷಿತ ನೀರು ಕುಡಿದು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದರು. ಸದ್ಯ ಗ್ರಾಮಸ್ಥರು ಬಳ್ಳಾರಿ, ಹೊಸಪೇಟೆ ಹಾಗು ಹುಬ್ಬಳ್ಳಿಯ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಇದನ್ನೂ ಓದಿ:ವಿಜಯನಗರ: ಕಲುಷಿತ ನೀರು ಕುಡಿದು 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ABOUT THE AUTHOR

...view details