ಕರ್ನಾಟಕ

karnataka

ETV Bharat / city

ಲಂಚಕ್ಕೆ ಬೇಡಿಕೆಯಿಟ್ಟ ವಿಶೇಷ ಭೂಸ್ವಾಧೀನ ಅಧಿಕಾರಿಗಳು ಎಸಿಬಿ ಬಲೆಗೆ..

ವಿಶೇಷ ಭೂಸ್ವಾಧೀನ ಕಚೇರಿಯಲ್ಲಿ ಪರಿಹಾರ ಪಡೆಯಲು ಬರುವವರಿಂದ ಲಂಚಕ್ಕೆ ಬೇಡಿಕೆ ಇಡುತ್ತಿದ್ದ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ.

special-land-acquisition-officers-for-the-acb-trap

By

Published : Oct 15, 2019, 6:16 PM IST

ಬಳ್ಳಾರಿ:ವಿಶೇಷ ಭೂಸ್ವಾಧೀನ ಕಚೇರಿಯಲ್ಲಿ ಪರಿಹಾರ ಪಡೆಯಲು ಬರುವವರಿಂದ ಲಂಚದ ಬೇಡಿಕೆ ಇಡುತ್ತಿದ್ದ ಇಬ್ಬರು ಅಧಿಕಾರಿಗಳು ಎಸಿಬಿ ಬಲೆಗೆ ಬಿದ್ದಿದ್ದಾರೆ. ಬಂಧಿತರನ್ನ ಸದ್ಯ ನ್ಯಾಯಾಂಗ ಬಂಧನಕ್ಕೆ ಕಳುಹಿಸಲಾಗಿದೆ.

ರಾಷ್ಟ್ರೀಯ ಹೆದ್ಧಾರಿ ನಿರ್ಮಾಣಕ್ಕಾಗಿ ಭೂಮಿ ಕಳೆದುಕೊಂಡಿದ್ದ ರೈತ ಎ.ವೆಂಕಟರಮಣ ಅವರು ಪರಿಹಾರ ₹1,04,828 ಪಡೆಯಲು ಬಳ್ಳಾರಿ ವಿಶೇಷ ಭೂಸ್ವಾಧೀನ ಕಚೇರಿ ಹಾಗೂ ಭಾರತೀಯ ರಾಷ್ಟ್ರೀಯ ಹೆದ್ದಾರಿಗಳ ಪ್ರಾಧಿಕಾರ ಕಚೇರಿಗೆ ಭೇಟಿ ನೀಡಿದ್ದರು. ಆರೋಪಿಗಳಾದ ಇಸ್ಮಾಯಿಲ್ ಸಾಹೇಬ್ ಶಿರಹಟ್ಟಿ ಮತ್ತು ಕೆ.ಸಿದ್ದಪ್ಪ ₹8 ಸಾವಿರಕ್ಕೆ ಬೇಡಿಕೆ ಇಟ್ಟಿದ್ದರು. ಅಲ್ಲದೆ, ದೂರವಾಣಿ ಮೂಲಕವೂ ಲಂಚ ಕೇಳಿದ್ದರು.

ಲಂಚ ನೀಡಲು ನಿರಾಕರಿಸಿದ ವೆಂಕಟರಮಣ ಇಂದು ಬೆಳಿಗ್ಗೆ 9 ಗಂಟೆಗೆ ಎಸಿಬಿಗೆ ದೂರು ನೀಡಿದ್ದರು. ದೂರವಾಣಿ ಮೂಲಕ ಲಂಚ ನೀಡುವಂತೆ ಬೇಡಿಕೆ ಇಟ್ಟಿದ್ದನ್ನು ರೆಕಾರ್ಡ್​​ ಮಾಡಿಕೊಂಡು ಎಸಿಬಿಗೆ ನೀಡಿದ್ದಾರೆ. ಎಸಿಬಿ ಅಧಿಕಾರಿಗಳು ಮತ್ತು ಸಿಬ್ಬಂದಿ ದಾಳಿ ನಡೆಸಿ ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.

ABOUT THE AUTHOR

...view details