ಬಳ್ಳಾರಿ: ನಗರದ ಹೊರವಲಯದ ವಿಜಯನಗರ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ ವಿಮ್ಸ್ ಪ್ರಸೂತಿ ಮತ್ತು ಸ್ತ್ರೀರೋಗ ವಿಭಾಗ ಮತ್ತು ಜಿಲ್ಲಾ ಪ್ರಸೂತಿ ಹಾಗೂ ಸ್ತ್ರೀರೋಗ ಸಂಘದ ಸಂಯುಕ್ತ ಆಶ್ರಯದಲ್ಲಿ ಹಮ್ಮಿಕೊಂಡಿದ್ದ ಮೂರು ದಿನಗಳ 30ನೇ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ರಾಜ್ಯ ಸಮ್ಮೇಳನದ ಕಾರ್ಯಕ್ರಮ ನಡೆಯಿತು.
ಬಳ್ಳಾರಿಯಲ್ಲಿ 30ನೇ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ರಾಜ್ಯ ಸಮ್ಮೇಳನ
ಬಳ್ಳಾರಿಯ ವಿಜಯನಗರ ವೈದ್ಯಕೀಯ ಶಿಕ್ಷಣ ಸಂಸ್ಥೆಯ ಆವರಣದಲ್ಲಿ 30ನೇ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ರಾಜ್ಯ ಸಮ್ಮೇಳನದ ಕಾರ್ಯಕ್ರಮ ನಡೆಯಿತು.
ಈಟಿವಿ ಭಾರತ್ ಜೊತೆ ಮಾತನಾಡಿದ ಸಮ್ಮೇಳನದ ಸಂಘಟನಾ ಕಾರ್ಯದರ್ಶಿ ಡಾ.ವೀರೇಂದ್ರ ಕುಮಾರ್, 30ನೇ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರ ರಾಜ್ಯ ಸಮ್ಮೇಳನದ ಧ್ಯೇಯ ವಾಕ್ಯ- 'ಮಾತಾ ರಕ್ಷಿತಃ ರಕ್ಷಿತಂ'. ಅಂದರೆ ತಾಯಿಯನ್ನು ರಕ್ಷಿಸಿದರೆ ರಾಷ್ಟ್ರದ, ಸಮಾಜದ, ರಾಜ್ಯದ ಅಭಿವೃದ್ಧಿಯಾಗುತ್ತದೆ ಎಂದು ತಿಳಿಸಿದರು. ಸಾವಿರಕ್ಕೂ ಹೆಚ್ಚು ತಜ್ಞ ವೈದ್ಯರು ಹಾಗೂ 20 ರಾಷ್ಟ್ರೀಯ ಸಂಪನ್ಮೂಲ ವ್ಯಕ್ತಿಗಳು ಬಂದಿದ್ದಾರೆ. ಈ ಕಾರ್ಯಕ್ರಮದ ಮುಖ್ಯ ಉದ್ದೇಶ ತಾಯಿಯ ಮರಣ ಪ್ರಮಾಣ ಕಡಿಮೆ ಮಾಡುವುದು ಮತ್ತು ಆಧುನಿಕ ಬೆಳವಣಿಗೆಗಳನ್ನು ಜನಸಾಮಾನ್ಯರಿಗೆ ಮತ್ತು ಹಳ್ಳಿಯಲ್ಲಿ ಕಾರ್ಯ ನಿರ್ವಹಿಸುವ ವೈದ್ಯರಿಗೂ ತಲುಪಿಸುವ ಕೆಲಸ ಮಾಡುವುದು ಎಂದು ತಿಳಿಸಿದರು.
ಕಾರ್ಯಕ್ರಮದಲ್ಲಿ ನೂರಾರು ತಜ್ಞ ವೈದ್ಯರು, ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.