ಹೊಸಪೇಟೆ:ಸಂವಿಧಾನದ ಬಗ್ಗೆ ತಿಳುವಳಿಕೆ ಇಲ್ಲದವರು ಅದನ್ನು ತಿದ್ದುಪಡಿ ಮಾಡುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ಅವರೆಲ್ಲ ಅಜ್ಞಾನಿಗಳು. 70 ವರ್ಷಗಳಿಂದ ಕಾಂಗ್ರೆಸ್ ದಲಿತರ ಹೆಸರೇಳಿಕೊಂಡು ಆಡಳಿತ ನಡೆಸಿಕೊಂಡು ಬರುತ್ತಿದ್ದು, ಇದುವರೆಗೂದಲಿತರಿಗೆ ಸೂಕ್ತ ಸ್ಥಾನಮಾನ ನೀಡಿಲ್ಲ ಎಂದು ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಹೇಳಿದರು.
ಸಂವಿಧಾನ ತಿದ್ದುಪಡಿಯ ಬಗ್ಗೆ ಮಾತಾಡುವವರು ಅಜ್ಞಾನಿಗಳು: ಡಿಸಿಎಂ ಕಾರಜೋಳ - Deputy chief minister talking about Constitution
ದಲಿತ ಹಾಗೂ ಪ್ರಗತಿಪರ ಸಂಘದ ಸದಸ್ಯರೊಂದಿಗೆ ಮಾತನಾಡಿದ ಮಾತನಾಡಿದ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಅವರು, 'ಸಂವಿಧಾನದ ಬಗ್ಗೆ ತಿಳುವಳಿಕೆ ಇಲ್ಲದವರು ಅದನ್ನು ತಿದ್ದುಪಡಿ ಮಾಡುವುದಾಗಿ ಹೇಳಿಕೆ ನೀಡುತ್ತಿದ್ದಾರೆ. ಅವರು ಅಜ್ಞಾನಿಗಳು ಎಂದು ಕಿಡಿಕಾರಿದರು.
ದಲಿತ ಹಾಗೂ ಪ್ರಗತಿಪರ ಸಂಘದ ಸದಸ್ಯರೊಂದಿಗೆ ಮಾತನಾಡಿದ ಅವರು, ಅಸ್ಪೃಶ್ಯತೆ ಇರುವ ತನಕ ಮೀಸಲಾತಿ ಯಾರು ತೆಗೆಯಲ್ಲ. ಬಿಜೆಪಿ ದಲಿತರ ಅಭಿವೃದ್ಧಿಗಾಗಿ ಶ್ರಮಿಸುತ್ತಿದೆ. ತಿಳುವಳಿಕೆ ಇಲ್ಲದ ಅಜ್ಞಾನಿಗಳು ಸಂವಿಧಾನ ತಿದ್ದುಪಡಿ ಮಾಡುತ್ತೇವೆ ಎಂದು ಅಪಾಯಕಾರಿ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಅವರ ಮಾತುಗಳಿಗೆ ಕಿವಿಗೊಡಬೇಡಿ ಎಂದರು.
ಪ್ರಧಾನಿ ಮೋದಿ ಅವರು ಸಂವಿಧಾನವನ್ನು ದೇಶದ ಧರ್ಮಗ್ರಂಥ ಎಂದು ಸಂಸತ್ತಿನಲ್ಲಿ ಪೂಜಿಸುತ್ತಾರೆ. ಕಾಂಗ್ರೆಸ್ನಲ್ಲಿ ನೆಹರು ಅವರಿಂದ ಹಿಡಿದು ಮನಮೋಹನ್ ಸಿಂಗ್ವರೆಗೂ ಸಂವಿಧಾನವನ್ನು ಪೂಜಿಸಿಲ್ಲ. ನಮ್ಮ ಜನಾಂಗದವರೆಲ್ಲರೂ ಬಿಜೆಪಿಗಾಗಿ ದುಡಿಯೋಣ. ಸಮಾಜದ ಅಭಿವೃದ್ಧಿಗೆ ಶ್ರಮಿಸೋಣ ಎಂದರು.