ಬಳ್ಳಾರಿ:ಗಣಿನಾಡು ಬಳ್ಳಾರಿ ಜಿಲ್ಲೆಯಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಗಣಿನಾಡಿನಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ: ನಾಲ್ವರ ಸಾವು - ಬಳ್ಳಾರಿ ಕಾರು ಪಲ್ಟಿ ಸುದ್ದಿ
ಜಿಲ್ಲೆಯ ರಾಂಪುರ ಮತ್ತು ಕೂಡ್ಲಿಗಿಯಲ್ಲಿ ರಸ್ತೆ ಅಪಘಾತ ಸಂಭವಿಸಿದ್ದು, ನಾಲ್ವರು ಸ್ಥಳದಲ್ಲೇ ಮೃತಪಟ್ಟ ಘಟನೆ ಸಂಭವಿಸಿದೆ.
![ಗಣಿನಾಡಿನಲ್ಲಿ ಎರಡು ಪ್ರತ್ಯೇಕ ರಸ್ತೆ ಅಪಘಾತ: ನಾಲ್ವರ ಸಾವು](https://etvbharatimages.akamaized.net/etvbharat/prod-images/768-512-6171420-thumbnail-3x2-accident.jpg)
ಜಿಲ್ಲೆಯ ಗಡಿಭಾಗಕ್ಕೆ ಹೊಂದಿಕೊಂಡಿರುವ ರಾಂಪುರ ಸಮೀಪ ಚಾಲಕನ ನಿಯಂತ್ರಣ ತಪ್ಪಿ ಕಾರು ಪಲ್ಟಿಯಾಗಿದ್ದು, ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ ಇನ್ನುಳಿದ ಇಬ್ಬರ ಸ್ಥಿತಿ ಚಿಂತಾಜನಕವಾಗಿದೆ. ಬಳ್ಳಾರಿ ನಗರ ನಿವಾಸಿಗಳಾದ ತನುಜಾ, ರವಿ ಸಾವಿಗೀಡಾದವರು. ಈ ಕುರಿತು ಬಳ್ಳಾರಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಕೂಡ್ಲಿಗಿ ತಾಲೂಕಿನ ಹುಲಿಕುಂಟೆ ಗ್ರಾಮದ ಬಳಿ ಮತ್ತೊಂದು ರಸ್ತೆ ಅಪಘಾತ ನಡೆದಿದ್ದು, ಬೈಕ್ ಗೆ ಟಿಪ್ಪರ್ ಡಿಕ್ಕಿ ಹೊಡೆದ ಪರಿಣಾಮ, ನಡುವರ್ತಿ ಗ್ರಾಮ ನಿವಾಸಿಗಳಾದ ಚೆನ್ನಪ್ಪ(20), ಚಂದ್ರಪ್ಪ (20) ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೂಡ್ಲಿಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.