ಬಳ್ಳಾರಿ:ಚಲಿಸುತ್ತಿದ್ದ ಸಾರಿಗೆ ಬಸ್‌ನಿಂದ ಬಿದ್ದು ಮಹಿಳೆ ಸಾವನಪ್ಪಿರುವ ಘಟನೆ ತಾಲೂಕಿನ ವೇಣಿ ವೀರಾಪುರದ ಹೆದ್ದಾರಿಯಲ್ಲಿ ನಡೆದಿದೆ. ಮೃತರ ಗುರುತು ಪತ್ತೆಯಾಗಿಲ್ಲ. ಮಹಿಳೆ ಬಾಗಿಲು ಬಳಿ ನಿಂತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಅವಘಡ ಸಂಭವಿಸಿದೆ ಎನ್ನಲಾಗ್ತಿದೆ.
ಬಸ್ ಬಾಗಿಲ ಬಳಿ ನಿಂತು ಪ್ರಯಾಣ: ಆಯತಪ್ಪಿ ಬಿದ್ದು ಮಹಿಳೆ ಸಾವು - ವೇಣಿ ವೀರಾಪುರ
ಬಳ್ಳಾರಿಯಿಂದ ಹೊಸಪೇಟೆ ಕಡೆ ತೆರಳುತ್ತಿದ್ದ ಸಾರಿಗೆ ಬಸ್‌ನಿಂದ ಕೆಳಗೆ ಬಿದ್ದು ಮಹಿಳೆ ಸಾವನ್ನಪ್ಪಿದ್ದಾರೆ.
ಸಾರಿಗೆ ಬಸ್
ಬಳ್ಳಾರಿಯಿಂದ ಹೊಸಪೇಟೆಗೆ ತೆರಳುತ್ತಿದ್ದKA 34, F-1228 ನಂಬರ್‌ನ ಸಾರಿಗೆ ಬಸ್ನಲ್ಲಿ ಮಹಿಳೆ ಪ್ರಯಾಣಿಸುತ್ತಿದ್ದರು. ಬಸ್ ಚಲಿಸುತ್ತಿರುವಾಗ ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಕುಡುತಿನಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ:ಕಳ್ಳತನಕ್ಕೆ ಯತ್ನ: ರೆಡ್ ಹ್ಯಾಂಡ್ ಆಗಿ ಸಿಕ್ಕಿಬಿದ್ದ ಪೊಲೀಸ್ ಕಾನ್ಸ್ಟೇಬಲ್