ಬಳ್ಳಾರಿ:ವಿಶ್ವ ಕ್ಷಯರೋಗ ದಿನದ ಜಾಗೃತಿ ಜಾಥಾ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಪವನಕುಮಾರ್ ಮಾಲಪಾಟಿ ಜಿಲ್ಲಾಸ್ಪತ್ರೆ ಆವರಣದಲ್ಲಿ ಚಾಲನೆ ನೀಡಿದರು.
bಬಳ್ಳಾರಿಯಲ್ಲಿ ವಿಶ್ವ ಕ್ಷಯರೋಗ ದಿನದ ಜಾಗೃತಿ ಜಾಥಾ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ವಿಜಯನಗರ ವೈದ್ಯಕೀಯ ವಿಜ್ಞಾನ ಸಂಸ್ಥೆ, ರಾಷ್ಟ್ರೀಯ ಕ್ಷಯರೋಗ ನಿರ್ಮೂಲನ ಕಾರ್ಯಕ್ರಮ, ಜಿಲ್ಲಾ ಕ್ಷಯರೋಗ ನಿರ್ಮೂಲನಾ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಸಾರ್ವಜನಿಕರಲ್ಲಿ ಕ್ಷಯ ರೋಗದ ಬಗ್ಗೆ ಜಾಗೃತಿ ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಈ ಜಾಗೃತಿ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಜಿಲ್ಲಾಧಿಕಾರಿ, ರಾಜ್ಯದಲ್ಲಿ ಇತರ ಜಿಲ್ಲೆಗಳಿಗೆ ಹೋಲಿಸಿದರೆ ನಮ್ಮ ಜಿಲ್ಲೆಯಲ್ಲಿ ಕ್ಷಯರೋಗ ಹೆಚ್ಚಿನ ಪ್ರಮಾಣದಲ್ಲಿದೆ. ರಾಜ್ಯದಲ್ಲಿ ನಮ್ಮ ಜಿಲ್ಲೆ ಕ್ಷಯರೋಗ ಪ್ರಕರಣಗಳಲ್ಲಿ ಮೂರನೇ ಸ್ಥಾನ ಪಡೆದಿದೆ. ವೈದ್ಯರು ಕಠಿಣ ಕ್ರಮವಹಿಸಿದರೆ, ನಮ್ಮ ಜಿಲ್ಲೆಯನ್ನು ಮೂರ್ನಾಲ್ಕು ವರ್ಷಗಳಲ್ಲಿ ಸಂಪೂರ್ಣವಾಗಿ ಕ್ಷಯರೋಗ ಮುಕ್ತ ಜಿಲ್ಲೆಯನ್ನಾಗಿ ರೂಪಿಸಬಹುದು. ಕೊರೊನಾ ಕಾರಣದಿಂದಾಗಿ ಕಳೆದ ವರ್ಷ ಕ್ಷಯರೋಗವನ್ನು ನಿಯಂತ್ರಿಸಲು ಸಾಧ್ಯವಾಗಲಿಲ್ಲ. ಇದೀಗ 2ನೇ ಅಲೆ ಆರಂಭವಾಗಿದ್ದರೂ, ನಮ್ಮನ್ನು ಕಾಡುತ್ತಿದ್ದರೂ ಕ್ಷಯರೋಗದ ಬಗ್ಗೆ ಜನರಲ್ಲಿ ಅರಿವು ಮೂಡಿಸುವುದು ಅತ್ಯವಶ್ಯಕ. ಇದಕ್ಕೆ ಸಾರ್ವಜನಿಕರ ಸಹಕಾರ ಕೂಡ ಅಗತ್ಯವಾಗಿದೆ ಎಂದರು.
ಜಾಗೃತಿ ಜಾಥಾವು ಜಿಲ್ಲಾಸ್ಪತ್ರೆಯಿಂದ ಆರಂಭವಾಗಿ, ಇಂದಿರಾ ಸರ್ಕಲ್ ಮುಖಾಂತರ ಮೀನಾಕ್ಷಿ ಸರ್ಕಲ್, ರಾಯಲ್ ಸರ್ಕಲ್ ಮಾರ್ಗವಾಗಿ ಬಿಡಿಎಎ ಫುಟ್ಬಾಲ್ ಸಭಾಂಗಣದವರೆಗೆ ನಡೆಯಿತು. ಈ ವೇಳೆ ಕ್ಷಯರೋಗ ಜಾಗೃತಿ ಸಂದೇಶ ಸಾರುವ ಫಲಕಗಳು ಗಮನ ಸೆಳೆದವು.
ಓದಿ:ಸದನದಲ್ಲಿ ಮುಂದುವರೆದ ‘ಸಿಡಿ’ ವಾರ್.. ‘ಬ್ಲ್ಯೂ ಬಾಯ್ಸ್’ ಎಂದು ಧಿಕ್ಕಾರ ಕೂಗಿದ ವಿಪಕ್ಷ ಸದಸ್ಯರು