ಬೆಂಗಳೂರು/ ಮೈಸೂರು:ರಾಜ್ಯ ರಾಜಧಾನಿ ಬೆಂಗಳೂರು ಹಾಗೂ ಸಾಂಸ್ಕ್ರತಿಕ ನಗರಿ ಮೈಸೂರು ನಡುವಣ ದಶಪಥ ರಸ್ತೆಯಲ್ಲಿ, 56.20 ಕಿ.ಮೀ ಬೆಂಗಳೂರು-ನಿಡಘಟ್ಟ ಮೊದಲ ಹಂತದ ಕಾಮಗಾರಿ 2021ರ ಅಂತ್ಯಕ್ಕೆ ಪೂರ್ಣಗೊಳ್ಳಲಿದೆ ಎಂದು ಲೋಕೋಪಯೋಗಿ ಸಚಿವ ಹೆಚ್ ಡಿ ರೇವಣ್ಣ ತಿಳಿಸಿದರು.
ವಿಧಾನಸೌಧದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಈ ಸಂಬಂಧ ಈಗಾಗಲೇ ಶೇ.90ರಷ್ಟು ಭೂ ಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡಿದೆ. ಎನ್ಎಚ್ 271 ಬೆಂಗಳೂರು -ನಿಡಘಟ್ಟ ಹೈವೇ ಪ್ರಾರಂಭ ಮಾಡುತ್ತೇವೆ. ಸುಮಾರು 56.20 ಕಿಲೋ ಮೀಟರ್ ಉದ್ದದ ರಸ್ತೆ ಇದಾಗಿದ್ದು, 2,190 ಕೋಟಿ ವೆಚ್ಚದಲ್ಲಿ 10 ಪಥದ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ ಎಂದು ಸ್ಪಷ್ಟಪಡಿಸಿದರು.
ಎರಡನೇ ಪ್ಯಾಕೇಜ್, 61.10 ಕಿ.ಮೀ ನಿಡಘಟ್ಟ - ಮೈಸೂರು ರಾಷ್ಟ್ರೀಯ ಹೆದ್ದಾರಿ ಕಾಮಗಾರಿ, ಈ ತಿಂಗಳ ಅಂತ್ಯದಲ್ಲಿ ಪ್ರಾರಂಭವಾಗಲಿದ್ದು, 2283.50 ಕೋಟಿ ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. 2021ಕ್ಕೆ ಕಾಮಗಾರಿ ಮುಕ್ತಾಯವಾಗುತ್ತದೆ ಎಂದು ವಿವರಿಸಿದರು.
ಮೊದಲ ಹಂತದ ಕಾಮಗಾರಿಗೆ ಸುಮಾರು 500 ಹೆಕ್ಟೇರ್ ಭೂಮಿ ಸ್ವಾಧೀನ ಪಡಿಸಿಕೊಂಡಿದ್ದು, 3 ಸಾವಿರ ಕೋಟಿ ಪರಿಹಾರ ನೀಡಲಾಗುತ್ತಿದೆ. ಮೊದಲ ಹಂತದಲ್ಲಿ ಬಿಡದಿ ಬಳಿ 7 ಕಿ.ಮೀ. ಬೈಪಾಸ್ ರಸ್ತೆ, ಚನ್ನಪಟ್ಟಣ-ರಾಮನಗರ 22 ಕಿ.ಮೀ, ಮದ್ದೂರು ಬಳಿ 6 ಕೀ.ಮೀ ಬೈಪಾಸ್ ರಸ್ತೆ ಮತ್ತು 6 ಕಿ.ಮೀ ಎಲಿವೇಟೆಡ್ ರಸ್ತೆ ನಿರ್ಮಿಸಲಾಗುತ್ತದೆ. ಜತೆಗೆ ಮಂಡ್ಯ ಬಳಿ 9 ಕಿ.ಮೀ ಹಾಗೂ ಶ್ರೀರಂಗಪಟ್ಟಣದ ಬಳಿ 7 ಕಿ.ಮೀ ಬೈಪಾಸ್ ರಸ್ತೆ ನಿರ್ಮಾಣಗೊಳ್ಳಲಿದೆ. ರಾಮನಗರ-ಚನ್ನಪಟ್ಟಣ 22 ಕಿ.ಮೀ ರಸ್ತೆಯನ್ನು ಎಲಿವೇಟೆಡ್ ರಸ್ತೆಯನ್ನಾಗಿ ಮಾಡಲು ಕೇಂದ್ರ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದರು.
ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದಿಂದ 37 ಸಾವಿರ ಕೋಟಿ ರೂ. ವೆಚ್ಚದಲ್ಲಿ 3600 ಕಿ.ಮೀ ರಸ್ತೆ ಅಭಿವೃದ್ಧಿಪಡಿಸಲು ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿ ಪ್ರಾರಂಭವಾಗಿದೆ ಎಂದು ವಿವರಿಸಿದರು.
ಇತರೆ ರಾಷ್ಟ್ರೀಯ ಹೆದ್ದಾರಿ ಯೋಜನೆ...
- ಶ್ರೀರಂಗಪಟ್ಟಣ-ಬೀದರ್ ರಸ್ತೆ ಪ್ರಗತಿಯಲ್ಲಿದೆ
- 1008 ಕೋಟಿ ರೂ. ವೆಚ್ಚದ ದಿಂಡಗಲ್- ಬೆಂಗಳೂರು 171 ಕಿ.ಮೀ. ರಸ್ತೆ ಶೇ.97ರಷ್ಟು ಪೂರ್ಣ