ಬೆಂಗಳೂರು: ಪಿಎಸ್ಐ ನೇಮಕಾತಿ ಅಕ್ರಮಕ್ಕೆ ಸಂಬಂಧಿಸಿದಂತೆ 12 ಅಭ್ಯರ್ಥಿಗಳನ್ನು ಹೈಗ್ರೌಂಡ್ಸ್ ಠಾಣಾ ಪೊಲೀಸರು ಬಂಧಿಸಿದ್ದಾರೆ. ಸಿಐಡಿ ಡಿಎಸ್ಪಿ ನೀಡಿದ ದೂರಿನನ್ವಯ ಆರೋಪಿಗಳನ್ನು ಬಂಧಿಸಿರುವ ಪೊಲೀಸರು, 8ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಕೋರಮಂಗಲದ ನಿವಾಸಕ್ಕೆ ಹಾಜರುಪಡಿಸಿ, 10 ದಿನ ವಶಕ್ಕೆ ಪಡೆದರು.
ಪಿಎಸ್ಐ ನೇಮಕಾತಿ ಅಕ್ರಮ: ಬೆಂಗಳೂರಿನಲ್ಲಿ 12 ಅಭ್ಯರ್ಥಿಗಳ ಬಂಧನ - ಪಿಎಸ್‌ಐ ನೇಮಕಾತಿ ಪರೀಕ್ಷೆ ಅಕ್ರಮ 12 ಅಭ್ಯರ್ಥಿಗಳ ಬಂಧನ
ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಅಕ್ರಮ ಎಸಗಿದ್ದ ಆರೋಪದಡಿ ಹಲವು ಅಭ್ಯರ್ಥಿಗಳನ್ನು ಹೈಗ್ರೌಂಡ್ಸ್ ಠಾಣೆ ಪೊಲೀಸರು ಶನಿವಾರ ಬಂಧಿಸಿದ್ದಾರೆ. ಇನ್ನೂ 10 ಮಂದಿಯ ಬಂಧನ ಆಗಬೇಕಿದೆ. ಈ ಕುರಿತ ತನಿಖೆ ಮುಂದುವರಿದಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಬೆಂಗಳೂರು
ಬಂಧಿತರು 2020-21ನೇ ಸಾಲಿನಲ್ಲಿ ಬೆಂಗಳೂರಿನ ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದಾರೆ. ತನಿಖೆಯ ವೇಳೆ ಅಭ್ಯರ್ಥಿಗಳ ಒಎಂಆರ್ ಶೀಟ್‌ನ ಕಾರ್ಬನ್ ಪ್ರತಿ ಪಡೆಯಲಾಗಿತ್ತು. ಈ ಪೈಕಿ 22 ಅಭ್ಯರ್ಥಿಗಳ ಮೂಲ ಒಎಂಆರ್ ಪ್ರತಿ ಹಾಗೂ ಕಾರ್ಬನ್ ಪ್ರತಿಯಲ್ಲಿ ವ್ಯತ್ಯಾಸ ಕಂಡು ಬಂದಿದೆ. ಹೀಗಾಗಿ ಹೈಗ್ರೌಂಡ್ಸ್ ಠಾಣೆಗೆ ಸಿಐಡಿ ಡಿಎಸ್ಪಿ ದೂರು ಸಲ್ಲಿಸಿದ್ದರು.
ಇದನ್ನೂ ಓದಿ:PSI ಮರು ಪರೀಕ್ಷೆಯ ದಿನಾಂಕ ಶೀಘ್ರದಲ್ಲೇ ಪ್ರಕಟ: ಆರಗ ಜ್ಞಾನೇಂದ್ರ