ಬೆಂಗಳೂರು: ಬೆಳಗಾವಿ, ಕಲಬುರಗಿ, ಹುಬ್ಬಳ್ಳಿ-ಧಾರವಾಡ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ದಿನಾಂಕ ಘೋಷಿಸಿದ ಬೆನ್ನಲ್ಲೇ ರಾಜ್ಯದ 12 ಜಿಲ್ಲೆಗಳ 20 ಸ್ಥಾನಗಳ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ದಿನಾಂಕ ನಿಗದಿ ಮಾಡಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ.
ರಾಜ್ಯದ 12 ಜಿಲ್ಲೆಗಳ 20 ಸ್ಥಾನಗಳ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್ - ಸ್ಥಳೀಯ ಸಂಸ್ಥೆಗಳ ಚುನಾವಣೆ
ರಾಜ್ಯದ 12 ಜಿಲ್ಲೆಗಳ 20 ಸ್ಥಾನಗಳ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ದಿನಾಂಕ ನಿಗದಿ ಮಾಡಿ ರಾಜ್ಯ ಚುನಾವಣಾ ಆಯೋಗ ಆದೇಶ ಹೊರಡಿಸಿದೆ. ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 6ಕ್ಕೆ ಫಲಿತಾಂಶ ಹೊರಬೀಳಲಿದೆ.
ರಾಜ್ಯದ 12 ಜಿಲ್ಲೆಗಳ 20 ಸ್ಥಾನಗಳ ಸ್ಥಳೀಯ ಸಂಸ್ಥೆಗಳ ಉಪಚುನಾವಣೆಗೆ ಮುಹೂರ್ತ ಫಿಕ್ಸ್
ಸ್ಥಳೀಯ ಸಂಸ್ಥೆಗಳ ಉಪಚುನಾವಣೆ ಸೆಪ್ಟೆಂಬರ್ 3 ರಂದು ಚುನಾವಣೆ ನಡೆಯಲಿದ್ದು, ಸೆಪ್ಟೆಂಬರ್ 6ಕ್ಕೆ ಫಲಿತಾಂಶ ಹೊರಬೀಳಲಿದೆ. ಇದಕ್ಕೆ ಸಂಬಂಧಿಸಿದಂತೆ ಆಗಸ್ಟ್ 16 ರಂದು ಜಿಲ್ಲಾಧಿಕಾರಿಗಳು ಚುನಾವಣಾ ಅಧಿಸೂಚನೆ ಹೊರಡಿಸಲಿದ್ದು, ಅದೇ ದಿನದಿಂದ ಚುನಾವಣಾ ನೀತಿ ಸಂಹಿತೆ ಜಾರಿಯಾಗಲಿದೆ.
ಬೀದರ್, ಬಾಗಲಕೋಟೆ, ವಿಜಯಪುರ, ಬೆಳಗಾವಿ, ಕೊಪ್ಪಳ, ಗದಗ, ದಾವಣಗೆರೆ, ಕೊಡಗು, ಕೋಲಾರ, ರಾಮನಗರ, ಉತ್ತರ ಕನ್ನಡ ಜಿಲ್ಲೆಗಳ 20 ನಗರ ಸ‍್ಥಳೀಯ ಸಂಸ್ಥೆಗಳಿಗೆ ಸೆಪ್ಟೆಂಬರ್ 3 ರಂದು ಉಪಚುನಾವಣೆ ನಡೆಯಲಿದೆ.