ಕರ್ನಾಟಕ

karnataka

ETV Bharat / city

ರಾಜ್ಯದಲ್ಲಿ ಏಳುನೂರರ ಗಡಿದಾಟಿದ ಸೋಂಕಿತರು... ಒಟ್ಟು 366 ಮಂದಿ ಗುಣಮುಖ - ಕೊರೊನಾ ಸೋಂಕಿತರು

ರಾಜ್ಯದಲ್ಲಿ ಕೊರೊನಾ ಏಳುನೂರರ ಗಡಿದಾಟಿದೆ. ಇಂದು ಒಟ್ಟು 12 ಸೋಂಕಿತರು ಪತ್ತೆಯಾಗಿದ್ದು. ಒಟ್ಟು ಸೋಂಕಿತರ ಸಂಖ್ಯೆ 705ಕ್ಕೆ ಏರಿಕೆಯಾಗಿದೆ.

corona
ಕೊರೊನಾ

By

Published : May 7, 2020, 6:20 PM IST

ಬೆಂಗಳೂರು: ರಾಜ್ಯದಲ್ಲಿ ಸಂಜೆ ವರದಿಯಲ್ಲಿ ನಾಲ್ವರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು ಇಂದು ಒಟ್ಟು 12 ಮಂದಿಯಲ್ಲಿ ಸೋಂಕು ಕಾಣಿಸಿಕೊಂಡಿದೆ. ಇದರಿಂದಾಗಿ ರಾಜ್ಯದಲ್ಲಿ ಕೊರೊನಾ ಪೀಡಿತರ ಸಂಖ್ಯೆ ಒಟ್ಟು 705ಕ್ಕೆ ಏರಿಕೆಯಾಗಿದೆ.

ಕೊರೊನಾ

ಬಾಗಲಕೋಟೆಯಲ್ಲಿ 19 ವರ್ಷದ ಯುವತಿ ಸೇರಿದಂತೆ ಮೂವರಿಗೆ ಕೊರೊನಾ ಸೋಂಕು ದೃಢಪಟ್ಟಿದೆ. 55 ವರ್ಷ, 80 ವರ್ಷದ ಮಹಿಳೆಯರಿಗೆ 607ನೇ ರೋಗಿಯಿಂದ ಕೊರೊನಾ ಹರಡಿದೆ ಎಂದು ಆರೋಗ್ಯ ವರದಿ ದೃಢಪಡಿಸಿದೆ. ದಾವಣಗೆರೆಯಲ್ಲಿ ಮತ್ತೆ ಮೂವರಲ್ಲಿ ಸೋಂಕು ಕಂಡುಬಂದಿದ್ದು ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಕೊರೊನಾ

ಕಲಬುರಗಿಯಲ್ಲಿ ರೋಗಿ 641ರ ಸಂಪರ್ಕದಲ್ಲಿದ್ದ ಇಬ್ಬರಿಗೆ ಹಾಗೂ 642ರ ಸಂಪರ್ಕದಲ್ಲಿದ್ದ ಓರ್ವನಿಗೆ ಸೋಂಕು ಪತ್ತೆಯಾಗಿದೆ. ಬೆಳಗಾವಿಯಲ್ಲಿ 13 ವರ್ಷದ ಬಾಲಕಿಯಲ್ಲಿ ಸೋಂಕು ಪತ್ತೆಯಾಗಿದೆ. ಧಾರವಾಡದಲ್ಲಿ ತೀವ್ರ ಜ್ವರ, ಕೆಮ್ಮು, ನೆಗಡಿಯಿಂದ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯಲ್ಲಿ 35 ವರ್ಷದ ವ್ಯಕ್ತಿಯಲ್ಲಿ ಸೋಂಕು ಕಾಣಿಸಿಕೊಂಡಿದ್ದು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾನೆ. ಜೊತೆಗೆ ಬೆಂಗಳೂರು ನಗರದಲ್ಲಿಯೂ ಓರ್ವ ಮಹಿಳೆಯಲ್ಲಿ ಸೋಂಕು ಪತ್ತೆಯಾಗಿದೆ.

ಒಟ್ಟಿನಲ್ಲಿ ಇಂದಿಗೆ ರಾಜ್ಯದಲ್ಲಿ 705 ಕೋವಿಡ್-19 ಸೋಂಕಿತರು ಪತ್ತೆಯಾಗಿದ್ದು, ಒಟ್ಟು 30 ಮಂದಿ ಮೃತಪಟ್ಟಿದ್ದಾರೆ. ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆದ 366 ಮಂದಿ ಸೋಂಕಿನಿಂದ ಗುಣಮುಖರಾಗಿ, ಡಿಸ್ಚಾರ್ಜ್​ ಆಗಿದ್ದಾರೆ.

ABOUT THE AUTHOR

...view details