ಕರ್ನಾಟಕ

karnataka

ETV Bharat / city

ಯಲಹಂಕದಲ್ಲಿ 130 ಮಿ.ಮೀ ಮಳೆಯಿಂದಲೇ ಅಪಾರ್ಟ್ಮೆಂಟ್‌ಗೆ ಜಲ ಕಂಟಕ: ಗೌರವ್​ ಗುಪ್ತಾ - ಬಿಬಿಎಂಪಿ ಮುಖ್ಯ ಆಯುಕ್ತ

130 ಮಿ.ಮೀಗೂ ಅಧಿಕ ಮಳೆಯಾದ (Heavy rain in Bangalore) ಪರಿಣಾಮ ಯಲಹಂಕ ಕೆರೆ ತುಂಬಿ ಕೋಡಿ ಹರಿದಿದೆ. 8 ಅಡಿ ಅಗಲದ ರಾಜಕಾಲುವೆಯಲ್ಲಿ ಹೋಗಬೇಕಾದ ಕೋಡಿ ನೀರಿನ ರಭಸ ಹೆಚ್ಚಾದ ಪರಿಣಾಮ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್‌ಗೆ ನೀರು ನುಗ್ಗಿದೆ ಎಂದು ಬಿಬಿಎಂಪಿ ಆಯುಕ್ತರು ಮಾಹಿತಿ ನೀಡಿದ್ದಾರೆ.

130 mm rain is main reason to Water into the apartment from - BBMP Chief Commissioner
ಯಲಹಂಕದಲ್ಲಿ 130 ಮಿ.ಮೀ ಮಳೆಯಿಂದಲೇ ಅಪಾರ್ಟ್ಮೆಂಟ್‌ಗೆ ಜಲ ಕಂಟಕ - ಬಿಬಿಎಂಪಿ ಮುಖ್ಯ ಆಯುಕ್ತ

By

Published : Nov 22, 2021, 6:30 PM IST

ಬೆಂಗಳೂರು: ನಗರದಲ್ಲಿ ಭಾನುವಾರ ಸುರಿದ ಭಾರಿ ಮಳೆಯಿಂದಾಗಿ (Heavy rain in Bangalore) ಯಲಹಂಕ ವಲಯ ಕೆಂಪೇಗೌಡ ವಾರ್ಡ್ ವ್ಯಾಪ್ತಿಯ ಯಲಹಂಕ ಕೆರೆ ತುಂಬಿ ಕೇಂದ್ರೀಯ ವಿಹಾರ ಅಪಾರ್ಟ್‌ಮೆಂಟ್ (water logging in apartment) ಹಾಗೂ ಸುತ್ತಮುತ್ತಲಿನ ಪ್ರದೇಶಗಳು ಜಲಾವೃತಗೊಂಡಿದೆ. ಸ್ಥಳಕ್ಕೆ ಇಂದು ಶಾಸಕ ಎಸ್.ಆರ್. ವಿಶ್ವನಾಥ್, ಮುಖ್ಯ ಆಯುಕ್ತ ಗೌರವ್ ಗುಪ್ತಾ ಇಂದು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಅಪಾರ್ಟ್‌ಮೆಂಟ್‌ಗೆ ನುಗ್ಗಿರುವ ಮಳೆ ನೀರು
ನಿನ್ನೆ ರಾತ್ರಿ ಎರಡು ಗಂಟೆ ಸಮಯದಲ್ಲಿ 130 ಮಿ.ಮೀಗೂ ಹೆಚ್ಚು ಮಳೆಯಾದ ಪರಿಣಾಮ ಯಲಹಂಕ ಕೆರೆ ತುಂಬಿ ಕೆರೆಯ ಕೋಡಿ ಬಿದ್ದು, ರಾಜಕಾಲುವೆಯಲ್ಲಿ ನೀರಿನ ಪ್ರಮಾಣ ಹೆಚ್ಚಾದ ಪರಿಣಾಮ ಕೇಂದ್ರೀಯ ವಿಹಾರ ಅಪಾರ್ಟ್ಮೆಂಟ್‌ನಲ್ಲಿ ಸುಮಾರು 4 ಅಡಿಯಷ್ಟು ನೀರು ನಿಂತು ಜಲಾವೃತಗೊಂಡಿದೆ. ಅಪಾರ್ಟ್ಮೆಂಟ್‌ನಲ್ಲಿ 604 ಪ್ಲಾಟ್‌ಗಳಿದ್ದು, 1,600 ನಿವಾಸಿಗಳು ವಾಸಿಸುತ್ತಿದ್ದಾರೆ.
ಅಪಾರ್ಟ್‌ಮೆಂಟ್‌ನಲ್ಲಿ ಸಿಲುಕಿದ್ದವರನ್ನು ಟ್ರ್ಯಾಕ್ಟರ್‌ ಮೂಲಕ ಸ್ಥಳಾಂತರಿಸುವ ಕಾರ್ಯಾಚರಣೆ

ಮೆನೆಯಲ್ಲಿರುವವರಿಗೆ ಹಾಲು, ಬಿಸ್ಕೆಟ್, ಕ್ಯಾಂಡಲ್, ಬ್ರೆಡ್ ಹಾಗೂ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗುತ್ತಿದೆ. 18 ಎನ್‌ಡಿಆರ್‌ಎಫ್‌ ತಂಡಗಳು ಹಾಗೂ ಅಗ್ನಿ ಶಾಮಕ ತಂಡಗಳು ದೋಣಿಗಳು ಹಾಗೂ ಟ್ರ್ಯಾಕ್ಟರ್ ಮೂಲಕ ನಿವಾಸಿಗಳನ್ನು ಮನೆಯಿಂದ ಹೊರಗೆ ಕರೆತರುವ ಹಾಗೂ ಒಳಗೆ ಕರೆದೊಯ್ಯುವ ಕೆಲಸ ಮಾಡುತ್ತಿದ್ದಾರೆ. ಯಾರಿಗೂ ಯಾವುದೇ ಸಮಸ್ಯೆ ಆಗುವುದಿಲ್ಲ. ಪಾಲಿಕೆಯ ಕಂದಾಯ ಅಧಿಕಾರಿಗಳ ತಂಡವು ನಿವಾಸಿಗಳ ಮನೆಗೆ ತೆರಳಿ ಏನೇನು ಸಮಸ್ಯೆಯಾಗಿದೆ ಎಂಬ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಎನ್‌ಡಿಆರ್‌ಎಫ್‌, ಅಗ್ನಿಶಾಮಕ ಸಿಬ್ಬಂದಿಯಿಂದ ರಕ್ಷಣಾ ಕಾರ್ಯಾಚರಣೆ

ಪಾಲಿಕೆಯ ವೈದ್ಯಕೀಯ ತಂಡವನ್ನು ವ್ಯವಸ್ಥೆ ಮಾಡಲಾಗಿದ್ದು, 8 ವೈದ್ಯರನ್ನು ಸ್ಥಳದಲ್ಲಿ ನಿಯೋಜಿಲಸಲಾಗಿದೆ. ದಿನದ 24 ಗಂಟೆಯೂ ಒಬ್ಬ ವೈದ್ಯ, ಸಿಬ್ಬಂದಿ ಹಾಗೂ ಬೇಸಿಕ್ ಲೈಫ್ ಸಪೋರ್ಟ್ ಆ್ಯಂಬುಲೆನ್ಸ್‌ನ ವ್ಯವಸ್ಥೆ ಮಾಡಲಾಗಿದ್ದು, ಅಪಾರ್ಟ್ಮೆಂಟ್‌ನಲ್ಲಿರುವ ನಿವಾಸಿಗಳಿಗೆ ಏನಾದರು ಸಮಸ್ಯೆಯಾದರೆ ವೈದ್ಯಕೀಯ ತಂಡ ಕೂಡಲೇ ಸ್ಪಂದಿಸಲಿದೆ. ಯಾರಾದರು ಆಸ್ಪತ್ರೆಗೆ ತೆರಳುವ ಅವಶ್ಯಕತೆ ಇದ್ದರೆ ಅವರನ್ನು ಆ್ಯಂಬುಲೆನ್ಸ್‌ ಮೂಲಕ ಆಸ್ಪತ್ರೆಗೆ ದಾಖಲಿಸಲಾಗುತ್ತದೆ.

ಅಪಾರ್ಟ್‌ಮೆಂಟ್‌ಗೆ ನುಗ್ಗಿದ ನೀರಿನಿಂದ ಕಾರುಗಳಿಗೂ ಜಲ ದಿಗ್ಬಂಧನ

'8 ಅಡಿಯ ರಾಜಕಾಲುವೆ 33 ಅಡಿ ಅಗಲ ವಿಸ್ತರಿಸಲು ಸರ್ಕಾರಕ್ಕೆ ಪ್ರಸ್ತಾಪವನೆ':

ಈ ಮಳೆಯಿಂದಾದ ಸಮಸ್ಯೆ ಕುರಿತು ಮುಖ್ಯ ಆಯುಕ್ತ ಗೌರವ್ ಗುಪ್ತಾ ಪ್ರತಿಕ್ರಿಯಿಸಿ, ಯಲಹಂಕ ವಲಯ ವ್ಯಾಪ್ತಿಯಲ್ಲಿ ಭಾನುವಾರ ರಾತ್ರಿ 130 ಮಿಲಿಮೀಟರ್‌ಗೂ ಹೆಚ್ಚು ಮಳೆಯಾದ ಪರಿಣಾಮ ಕೆರೆ ತುಂಬಿ ರಾಜಕಾಲುವೆಯಲ್ಲಿ ಹೆಚ್ಚಿನ ನೀರು ಹರಿದು ಅಪಾರ್ಟ್ಮೆಂಟ್‌ ಜಲಾವೃತಗೊಂಡಿದೆ. ಪಾಲಿಕೆ ವತಿಯಿಂದ ಅಪಾರ್ಟ್ಮೆಂಟ್ ನಿವಾಸಿಗಳಿಗೆ ತಿಂಡಿ, ಹಾಲು ವಿತರಣೆ ಕೆಲಸ ಮಾಡಲಾಗುತ್ತಿದ್ದು, ಅಗತ್ಯ ಕ್ರಮ ಕೈಗೊಳ್ಳಲು ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಅಪಾರ್ಟ್‌ಮೆಂಟ್‌ನಲ್ಲಿ ನಿಂತಿರುವ ನೀರನ್ನು ರಾಜಕಾಲುವೆಯ ಮೂಲಕ ಹರಿದು ಹೋಗುವ ವ್ಯವಸ್ಥೆ ಮಾಡಲಾಗುತ್ತಿದೆ. ಯಲಹಂಕ ಕೆರೆಯಿಂದ ಜಕ್ಕೂರು ಕೆರೆಗೆ ಸಂಪರ್ಕ ಕಲ್ಪಿಸುವ ರಾಜಕಾಲುವೆಯು 8 ಅಡಿ ಅಗಲವಿದ್ದು, ಅದನ್ನು 33 ಅಡಿ ಅಗಲ ಮಾಡಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಈ ಸಂಬಂಧ ಸೂಕ್ತ ಅಗತ್ಯ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ಆಯುಕ್ತರು ಮಾಹಿತಿ ನೀಡಿದರು. ಜಂಟಿ ಆಯುಕ್ತರಾದ ಪೂರ್ಣಿಮಾ, ಮುಖ್ಯ ಇಂಜಿನಿಯರ್ ರಂಗನಾಥ್ ಹಾಗೂ ಇನ್ನಿತರೆ ಅಧಿಕಾರಿಗಳು ಈ ವೇಳೆ ಹಾಜರಿದ್ದರು.

ಇದನ್ನೂ ಓದಿ:ಬೆಂಗಳೂರು: ಮಳೆ ತಂದ ಅವಾಂತರ.. ಯಲಹಂಕ ಕೆರೆ ಕೋಡಿ ಹರಿದು ಕೇಂದ್ರೀಯ ವಿಹಾರ ಅಪಾರ್ಟ್​ಮೆಂಟ್​​ಗೆ ಜಲ ದಿಗ್ಬಂಧನ

ABOUT THE AUTHOR

...view details