ಬೆಂಗಳೂರು: ಡಿ. 7ರಿಂದ 15ರವರೆಗೂ ನಡೆಯುವ ವಿಧಾನಸಭಾ ಅಧಿವೇಶನ ಹಿನ್ನೆಲೆಯಲ್ಲಿ ವಿಧಾನಸೌಧದ ಎರಡು ಕಿ.ಮೀ. ಸುತ್ತಮುತ್ತಲು ನಿಷೇಧಾಜ್ಞೆ ಹೇರಿ ನಗರ ಪೊಲೀಸ್ ಆಯುಕ್ತ ಕಮಲ್ ಪಂತ್ ಆದೇಶ ಹೊರಡಿಸಿದ್ದಾರೆ.
ಅಧಿವೇಶನ ಹಿನ್ನೆಲೆಯಲ್ಲಿ ವಿವಿಧ ರಾಜಕೀಯ ಪಕ್ಷಗಳು, ಸಂಘ-ಸಂಸ್ಥೆಗಳ ಕಾರ್ಯಕರ್ತರು ಪ್ರತಿಭಟನೆ, ಧರಣಿ, ವಿಧಾನಸೌಧ ಮುತ್ತಿಗೆ, ಸತ್ಯಾಗ್ರಹ, ಮೆರವಣಿಗೆ ನಡೆಸುವ ಸಾಧ್ಯತೆಯಿದೆ. ಈ ವೇಳೆ ಕಾನೂನು ಸುವ್ಯವಸ್ಥೆಗೆ ಧಕ್ಕೆ ಬರುವ ಸಂಭವವಿದೆ. ಹೀಗಾಗಿ ಮಾ. 7ರ ಬೆಳಗ್ಗೆ 6 ಗಂಟೆಯಿಂದ ವಿಧಾನಸೌಧದ 2 ಕಿ.ಮೀ. ಸುತ್ತಮುತ್ತಲು ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ.