ಕರ್ನಾಟಕ

karnataka

ETV Bharat / city

ಬೆಂಗಳೂರು ನಗರದಾದ್ಯಂತ 144 ಸೆಕ್ಷನ್ ಜಾರಿ: ಎರಡು ಠಾಣಾ ವ್ಯಾಪ್ತಿಯಲ್ಲಿ ಕರ್ಫ್ಯೂ! - ಬೆಂಗಳೂರು ಗಲಭೆ ಸುದ್ದಿ

ಬೆಂಗಳೂರು ಗಲಭೆಗೆ ಸಂಬಂಧಿಸಿದಂತೆ ಸಿಲಿಕಾನ್ ಸಿಟಿಯಲ್ಲಿ ಸಂಪೂರ್ಣವಾಗಿ ಖಾಕಿ ಕಣ್ಗಾವಲು ಇಟ್ಟಿದ್ದು, ನಗರದಾದ್ಯಂತ 144 ಸೆಕ್ಷನ್ ಜಾರಿಯಾಗಿದೆ. ಡಿಜಿ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸದ್ಯ ಕರ್ಫ್ಯೂ ಜಾರಿ ಮಾಡಲಾಗಿದೆ.

144 section imposed in Bangalore city
144 ಸೆಕ್ಷನ್ ಜಾರಿ

By

Published : Aug 12, 2020, 7:28 AM IST

ಬೆಂಗಳೂರು:ಕೆ.ಜಿ ಹಳ್ಳಿ, ಡಿಜೆ ಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಗಲಭೆಗೆ ಸಂಬಂಧಿಸಿದಂತೆ ನಗರದಾದ್ಯಂತ 144 ಸೆಕ್ಷನ್ ಜಾರಿಯಾಗಿದ್ದು, ಡಿಜಿ ಹಳ್ಳಿ ಮತ್ತು ಕೆಜಿ ಹಳ್ಳಿ ಠಾಣಾ ವ್ಯಾಪ್ತಿಯಲ್ಲಿ ಸದ್ಯ ಕರ್ಫ್ಯೂ ಜಾರಿ ಮಾಡಲಾಗಿದೆ.

ಸಿಲಿಕಾನ್ ಸಿಟಿಯಲ್ಲಿ ಸಂಪೂರ್ಣವಾಗಿ ಖಾಕಿ ಕಣ್ಗಾವಲು ಇಟ್ಟಿದ್ದು, ಸದ್ಯ ಕರ್ಪ್ಯೂ ಜಾರಿಯಲ್ಲಿರುವುದರಿಂದ ಮನೆಯಿಂದ ಯಾರೂ ಹೊರ ಬಾರದಂತೆ ಪೊಲೀಸರು ಕಣ್ಗಾವಲು ಇಟ್ಟಿದ್ದಾರೆ.

ಗಲಭೆಯಿಂದ ಪೊಲೀಸರ ವಾಹನಗಳು ಬಹುತೇಕ ಜಖಂ ಆಗಿದ್ದು, ಸದ್ಯ ಸ್ಥಳದಲ್ಲಿ ಪರಿಶೀಲನೆ ಮಾಡುವ ವ್ಯವಸ್ಥೆಯನ್ನು ಹಿರಿಯ ಅಧಿಕಾರಿಗಳು ಮಾಡುತ್ತಿದ್ದಾರೆ. ಪ್ರತಿ ಮನೆ ಮನೆಗೆ ತೆರಳಿ ಪೊಲೀಸರು ಆರೋಪಿಗಳನ್ನು ಹಿಡಿದು ತರುತ್ತಿದ್ದಾರೆ.

ಆರು ಮಂದಿಗೆ ತೀವ್ರ ಹುಡುಕಾಟ, ಹೊಸದಾಗಿ 37 ಮಂದಿ ಬಂಧನ

ಗಲಭೆಯಲ್ಲಿ ಭಾಗಿಯಾದ ಕೆಲವು ಆರೋಪಿಗಳಿಗೆ ಗಾಳಿಯಲ್ಲಿ ಗುಂಡು ಹಾರಿಸಿದ್ದು, ಈ ವೇಳೆ, ಬಹುತೇಕ ಮಂದಿಗೆ ಗಾಯವಾಗಿದೆ. ಘಟನೆಯಲ್ಲಿ ಮೂರು ಮಂದಿ ಸಾವನ್ನಪ್ಪಿದ್ದಾರೆ. ಸದ್ಯ ಗುಂಡಿನ ಏಟು ತಿಂದರೂ ಕೂಡ ಆರೋಪಿಗಳು ಆಸ್ಪತ್ರೆಯಿಂದಲೇ ಎಸ್ಕೇಪ್ ಆಗಿದ್ದಾರೆ. ಸದ್ಯ ಡಿ.ಜೆ ಹಳ್ಳಿ ಪೊಲೀಸರು ಮತ್ತೆ 37 ಆರೋಪಿಗಳನ್ನ ಬಂಧಿಸಿ ತನಿಖೆ ನಡೆಸುತ್ತಿದ್ದಾರೆ.

ABOUT THE AUTHOR

...view details