ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೋವಿಡ್ ಪ್ರಕರಣಗಳಲ್ಲಿ ಅಲ್ಪ ಏರಿಕೆ ಕಂಡಿದ್ದು, 1,446 ಮಂದಿಯಲ್ಲಿ ಸೋಂಕು ದೃಢಪಟ್ಟಿದ್ದು, ಒಟ್ಟಾರೆ ಸಂಖ್ಯೆ 8,89,113ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿ ಹೊಸದಾಗಿ 1,446 ಕೊರೊನಾ ಪ್ರಕರಣ ಪತ್ತೆ: 13 ಸೋಂಕಿತರು ಬಲಿ - Karnataka corona infected
ರಾಜ್ಯದಲ್ಲಿ ಇಂದು 1,446 ಮಂದಿಯಲ್ಲಿ ಕೊರೊನಾ ಸೋಂಕು ಇರುವುದು ದೃಢಪಟ್ಟಿದ್ದು, 13 ಮಂದಿ ಕೋವಿಡ್ಗೆ ಬಲಿಯಾಗಿದ್ದಾರೆ. ಒಟ್ಟಾರೆ ಸೋಂಕಿನ ಸಂಖ್ಯೆ 8,89,113ಕ್ಕೆ ಏರಿಕೆಯಾಗಿದೆ.
ರಾಜ್ಯದಲ್ಲಿಂದು 1,446 ಮಂದಿಗೆ ಕೊರೊನಾ ಪಾಸಿಟಿವ್...13 ಮಂದಿ ಬಲಿ
ಇದೇ ಅವಧಿಯಲ್ಲಿ 894 ಮಂದಿ ಗುಣಮುಖರಾಗಿದ್ದು, ಈವರೆಗೆ 8,52,584 ಮಂದಿ ಸೋಂಕಿತರು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 13 ಮಂದಿ ಕೋವಿಡ್ಗೆ ಬಲಿಯಾಗಿದ್ದು, ಒಟ್ಟು ಮೃತರ ಸಂಖ್ಯೆ 11,821ಕ್ಕೆ ಏರಿಕೆಯಾಗಿದೆ. 24,689 ಸಕ್ರಿಯ ಪ್ರಕರಣಗಳಿದ್ದು, ಅದರಲ್ಲಿ 299 ಸೋಂಕು ಪೀಡಿತರು ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬೆಂಗಳೂರಿನಲ್ಲಿ 758 ಸೋಂಕಿನ ಪ್ರಕರಣಗಳು ದೃಢಪಟ್ಟಿದ್ದು, 6 ಮಂದಿ ಮೃತಪಟ್ಟಿದ್ದಾರೆ. 208 ಮಂದಿ ಗುಣಮುಖರಾಗಿದ್ದಾರೆ.
Last Updated : Dec 3, 2020, 7:54 PM IST