ಬೆಂಗಳೂರು:ಉಪಚುನಾಣೆಗೆ ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಅತೀ ಹೆಚ್ಚು ನಾಮಪತ್ರ ಸಲ್ಲಿಕೆಯಾಗಿದ್ದ ಶಿವಾಜಿನಗರ ಕ್ಷೇತ್ರದಲ್ಲಿ ಅಂತಿಮವಾಗಿ19 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ.
ಶಿವಾಜಿನಗರ ಕಣದಲ್ಲಿ 19 ಅಭ್ಯರ್ಥಿಗಳು... ಯಾರಾಗ್ತಾರೆ ಬಜಾರ್ ಕಾ ಸುಲ್ತಾನ್? - bangalore news
ಉಪಚುನಾಣೆಗೆ ರಾಜಧಾನಿ ಬೆಂಗಳೂರು ವ್ಯಾಪ್ತಿಯಲ್ಲಿ ಅತೀ ಹೆಚ್ಚು ನಾಮಪತ್ರ ಸಲ್ಲಿಕೆಯಾಗಿದ್ದ ಶಿವಾಜಿನಗರ ಕ್ಷೇತ್ರದಲ್ಲಿ ಅಂತಿಮವಾಗಿ19 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದಾರೆ.
ಚುನಾವಣಾ ಅಧಿಕಾರಿ ನಟೇಶ್
ಶಿವಜಿನಗರ ಉಪಚುನಾವಣೆಯಲ್ಲಿ ಅಂತಿಮವಾಗಿ 19 ಅಭ್ಯರ್ಥಿಗಳು!
ಈ ಬಗ್ಗೆ ಮಾಹಿತಿ ನೀಡಿದ ಚುನಾವಣಾ ಅಧಿಕಾರಿ ನಟೇಶ್, ಶಿವಾಜಿನಗರ ಉಪಚುನಾವಣೆಯಲ್ಲಿ ಒಟ್ಟು 32 ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದರು. ಅದರಲ್ಲಿ ಐದು ನಾಮಪತ್ರಗಳು ತಿರಸ್ಕೃತವಾಗಿ,ಎರಡೆರಡು ನಾಮಪತ್ರ ಸಲ್ಲಿಸಿದ್ದ ಕೆಲವು ಅಭ್ಯರ್ಥಿಗಳು ಒಂದೊಂದು ನಾಮಪತ್ರ ವಾಪಾಸ್ ಪಡೆದ ಹಿನ್ನೆಲೆಯಲ್ಲಿ, ಒಟ್ಟು 26 ಅಭ್ಯರ್ಥಿಗಳು ಚುನಾವಣಾ ಕಣದಲ್ಲಿ ಉಳಿದುಕೊಂಡಿದ್ದರು.
ಆದರೆ, ನಾಮಪತ್ರ ಹಿಂಪಡೆಯಲ ಕೊನೆಯ ದಿನವಾದ ನಿನ್ನೆ 7 ಸ್ವತಂತ್ರ ಅಭ್ಯರ್ಥಿಗಳು ನಾಮಪತ್ರ ವಾಪಾಸ್ ಪಡೆದಿದ್ದು,ಈಗ ಶಿವಾಜಿನಗರ ಉಪಕದನದಲ್ಲಿ 19 ಅಭ್ಯರ್ಥಿಗಳು ಉಳಿದುಕೊಂಡಿದ್ದಾರೆ.