ಬೆಂಗಳೂರು: ನಗರದ ಬಾಣಸವಾಡಿ ಮತ್ತು ಯಲಹಂಕ ಸಂಚಾರ ಠಾಣೆ ವ್ಯಾಪ್ತಿಯಲ್ಲಿ ಶುಕ್ರವಾರ ತಡರಾತ್ರಿ ನಡೆದ ಎರಡು ಪ್ರತ್ಯೇಕ ರಸ್ತೆ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವುದು ಬೆಳಕಿಗೆ ಬಂದಿದೆ.
ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಬೆಟ್ಟಹಲಸೂರಿನ ನಿವಾಸಿ ಉದಯಕುಮಾರ್(58) ಎನ್ನುವವರು ಮೃತಪಟ್ಟಿದ್ದಾರೆ. ಶುಕ್ರವಾರ ರಾತ್ರಿ 8 ಗಂಟೆ ಸುಮಾರಿಗೆ ಉದಯ್ ಕುಮಾರ್ ದ್ವಿಚಕ್ರ ವಾಹನದಲ್ಲಿ ವಿಮಾನ ನಿಲ್ದಾಣ ರಸ್ತೆಯಲ್ಲಿ ಹೋಗುತ್ತಿದ್ದರು. ಈ ವೇಳೆ ಅತೀ ವೇಗವಾಗಿ ಬಂದ ವಾಹನವೊಂದು ಉದಯ್ ಕುಮಾರ್‌ಗೆ ಬೈಕ್‌ಗೆ ಡಿಕ್ಕಿ ಹೊಡೆದಿದೆ. ಪರಿಣಾಮ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕೃತ್ಯ ಎಸಗಿದ ಚಾಲಕ ವಾಹನ ಸಮೇತ ಪರಾರಿಯಾಗಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಯಲಹಂಕ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.