ಕರ್ನಾಟಕ

karnataka

ETV Bharat / city

2023ರ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ಧ: ಹೆಚ್​ಡಿ ಕುಮಾರಸ್ವಾಮಿ - JDS Meeting

2023ರ ವಿಧಾನಸಭಾ ಚುನಾವಣೆಗೆ ಜೆಡಿಎಸ್​ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದಪಡಿಸಿದ್ದೇವೆ. ಇನ್ನು 134 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಗುರುತು ಮಾಡುವತಂಹ ಕೆಲಸವಾಗಬೇಕಾಗಿದೆ. ಇವರನ್ನು ಮುಂದಿನ ಚುನಾವಣೆಗೆ ಸಜ್ಜುಗೊಳಿಸುವ ಉದ್ದೇಶ ನಮ್ಮದು ಎಂದು ಕುಮಾರಸ್ವಾಮಿ ಹೇಳಿದ್ದಾರೆ.

HD Kumaraswamy
ಹೆಚ್​ಡಿ ಕುಮಾರಸ್ವಾಮಿ

By

Published : Sep 15, 2021, 4:52 AM IST

Updated : Sep 15, 2021, 5:16 AM IST

ಬೆಂಗಳೂರು : ಪಕ್ಷದ 30 ಜಿಲ್ಲಾ ಘಟಗಳ ಅಧ್ಯಕ್ಷರ ಸಭೆ ನಡೆಸಿದ್ದೇವೆ. ಪ್ರತಿ ಜಿಲ್ಲೆಯಲ್ಲಿ ಪಕ್ಷ ಬಲವರ್ಧನೆಗೆ ಚರ್ಚೆ ಮಾಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಪಕ್ಷದ ಕಚೇರಿ, ಜೆ.ಪಿ.ಭವನದಲ್ಲಿ ಮಂಗಳವಾರ ರಾತ್ರಿ ಜಿಲ್ಲಾಧ್ಯಕ್ಷರು, ಪಕ್ಷದ ಎಲ್ಲಾ ಶಾಸಕರು ಮತ್ತು ಮಾಜಿ ಶಾಸಕರ ಜೊತೆ ಸಭೆ ನಡೆಸಿದ ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಅವರು, 2023ರ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಮೊದಲ ಪಟ್ಟಿ ಸಿದ್ದಪಡಿಸಿದ್ದೇವೆ. ಇನ್ನು 134 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಗುರುತು ಮಾಡುವತಂಹ ಕೆಲಸವಾಗಿದೆ. ಇವರನ್ನು ಮುಂದಿನ ಚುನಾವಣೆಗೆ ಸಜ್ಜುಗೊಳಿಸುವ ಉದ್ದೇಶ ನಮ್ಮದು ಎಂದರು.

ಹೆಚ್​ಡಿ ಕುಮಾರಸ್ವಾಮಿ

ಅಭ್ಯರ್ಥಿಗಳಿಗೆ ಕಾರ್ಯಗಾರ: ಇದೇ ತಿಂಗಳ 28 ಮತ್ತು 29 ರಂದು ಮೊದಲ ಪಟ್ಟಿಯ ಅರ್ಭ್ಯರ್ಥಿಗಳಿಗೆ ಬಿಡದಿಯ ತಮ್ಮ ತೋಟದಲ್ಲಿ ಕಾರ್ಯಗಾರ ಆಯೋಜಿಸಲಾಗಿದೆ. ಆಯ್ಕೆ ಮಾಡಿದ ಅಭ್ಯರ್ಥಿಗಳನ್ನು ಜನರ ಬಳಿ ಕಳಿಸಲಿದ್ದೇವೆ ಎಂದು ಹೇಳಿದರು.

ಕಾಂಗ್ರೆಸ್ ಬೆಲೆ ಏರಿಕೆ ಚರ್ಚೆ ಮಾಡಬೇಕು ಅಂತಿದೆ. ರಾಜ್ಯದಲ್ಲಿ ಬಿಜೆಪಿ ಆಡಳಿತದಲ್ಲಿದ್ದು, ದೇವಾಲಯಗಳನ್ನು ಒಡೆಯುವ ಕೆಲಸವಾಗುತ್ತಿದೆ‌. ಇದು ಬಿಜೆಪಿಯ ಚುನಾವಣಾ ತಂತ್ರವಾಗಿದೆ. ಇದು ಬಿಜೆಪಿಯ ಇಬ್ಬಗೆಯ ನೀತಿಯಾಗಿದೆ ಎಂದು ಟೀಕಿಸಿದರು.

ಇದಕ್ಕೂ ಮುನ್ನ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡರ ಅಧ್ಯಕ್ಷತೆಯಲ್ಲಿ ಪಕ್ಷದ ಸಂಘಟನೆ, ಬಲವರ್ಧನೆ, ಮುಂಬರುವ ಚುನಾವಣೆ ಹಿನ್ನೆಲೆಯಲ್ಲಿ ಸಭೆ ನಡೆಯಿತು.
ತಾಲ್ಲೂಕು, ಜಿಲ್ಲಾಮಟ್ಟದ ನಾಯಕರು ಹಾಗೂ ಪಕ್ಷದ ಶಾಸಕರೊಂದಿಗೆ ವರಿಷ್ಠರು ಸುದೀರ್ಘ ಚರ್ಚೆ ನಡೆಸಿದರು.

ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಕೆ. ಕುಮಾರಸ್ವಾಮಿ, ಮಾಜಿ ಸಚಿವರಾದ ಬಂಡೆಪ್ಪ ಕಾಶೆಂಪೂರ್, ವೆಂಕಟರಾವ್ ನಾಡಗೌಡ, ಹೆಚ್.ಡಿ.ರೇವಣ್ಣ, ಸಾ.ರಾ.ಮಹೇಶ್ ಸೇರಿದಂತೆ ಹಲವಾರು ನಾಯಕರು ಭಾಗವಹಿಸಿದ್ದರು. ಆದರೆ ನಿರೀಕ್ಷೆಯಂತೆ ಶಾಸಕರಾದ ಜಿ.ಟಿ.ದೇವೇಗೌಡ, ಶ್ರೀನಿವಾಸ್ ಗೌಡ, ಗುಬ್ಬಿ ಶ್ರೀನಿವಾಸ್, ಕಾಂತರಾಜ್ ಮತ್ತಿತರರು ಸಭೆಗೆ ಗೈರಾಗಿದ್ದರು.

ಇದನ್ನು ಓದಿ:ಕೈ ನಾಯಕರಿಗೆ ಜೆಡಿಎಸ್ ಜತೆ ಮೈತ್ರಿಗೆ ಮನಸಿಲ್ಲ; ಬಿಜೆಪಿ, ಸಿಎಂರಿಂದ ಮೈತ್ರಿಗೆ ನಿರಂತರ ಮನವಿ: ಹೆಚ್​ಡಿಕೆ

Last Updated : Sep 15, 2021, 5:16 AM IST

ABOUT THE AUTHOR

...view details