ಬೆಂಗಳೂರು:ರಾಜ್ಯದಲ್ಲಿಂದು 2,258 ಮಂದಿಗೆ ಕೊರೊನಾ ಸೋಂಕು ದೃಢಪಟ್ಟಿದೆ. ಈ ಮೂಲಕ ಸೋಂಕಿತರ ಸಂಖ್ಯೆ 8,44,147ಕ್ಕೆ ಏರಿಕೆ ಆಗಿದೆ. ಇತ್ತ ಸೋಂಕಿಗೆ 22 ಮಂದಿ ಮೃತರಾಗಿದ್ದು, ಸಾವಿನ ಸಂಖ್ಯೆ 11,369ಕ್ಕೆ ಏರಿಕೆ ಆಗಿದೆ. ಇಂದು 2,235 ಸೋಂಕಿತರು ಗುಣಮುಖರಾಗಿದ್ದು, ಒಟ್ಟು 7,99,439 ಜನರು ಇಲ್ಲಿಯವರೆಗೆ ಆಸ್ಪತ್ರೆಗಳಿಂದ ಡಿಸ್ಚಾರ್ಜ್ ಆಗಿದ್ದಾರೆ. 19 ಸೋಂಕಿತರು ಅನ್ಯ ಕಾರಣಕ್ಕೆ ಮೃತರಾಗಿದ್ದಾರೆ.
ಇನ್ನು ರಾಜ್ಯದಲ್ಲಿ ಸಕ್ರಿಯ ಪ್ರಕರಣಗಳು ಸದ್ಯ 33,320 ಇದ್ದು, 887 ಸೋಂಕಿತರು ತೀವ್ರ ನಿಗಾ ಘಟಕದಲ್ಲಿದ್ದಾರೆ. ಕಳೆದ 7 ದಿನಗಳಿಂದ 47,707 ಮಂದಿ ಹೋಂ ಐಸೋಲೇಷನ್ನಲ್ಲಿ ಇದ್ದಾರೆ. ಪ್ರಾಥಮಿಕವಾಗಿ 2,35,496, ದ್ವಿತೀಯವಾಗಿ 2,43,732 ಜನರು ಸೋಂಕಿತರ ಸಂಪರ್ಕದಲ್ಲಿದ್ದಾರೆ.
ರಾಜ್ಯದಲ್ಲಿ ಸೋಂಕಿನ ಖಚಿತ ಪ್ರಕರಣಗಳ ಶೇಕಡವಾರು ಪ್ರಮಾಣ 2.12ರಷ್ಟು ಇದ್ದು, ಮೃತಪಟ್ಟವರ ಪ್ರಮಾಣ ಶೆ. 0.97ರಷ್ಟಿದೆ. ಇಂದು 1,06,317 ಮಂದಿಗೆ ಕೊರೊನಾ ಸೋಂಕು ಪರೀಕ್ಷೆ ಮಾಡಿಸಿದ್ದು, ಇದರಲ್ಲಿ 2,258 ಜನರಿಗೆ ಸೋಂಕು ದೃಢಪಟ್ಟಿದೆ.
ಬೆಂಗಳೂರು ನಗರದಲ್ಲಿಂದು ಅತಿ ಕಡಿಮೆ ಮಂದಿಯಲ್ಲಿ ಕೊರೊನಾ ಪಾಸಿಟಿವ್ ದೃಢಪಟ್ಟಿದ್ದು, 1,046 ಕೇಸ್ ಪತ್ತೆಯಾಗಿವೆ. ಸೋಂಕಿತರ ಸಂಖ್ಯೆ ಒಟ್ಟು 34,7748ಕ್ಕೆ ಏರಿಕೆಯಾಗಿದೆ. ಇಂದು 502 ಮಂದಿ ಗುಣಮುಖರಾಗಿದ್ದು, ಈವರೆಗೆ ಒಟ್ಟು 3,25,824 ಮಂದಿ ಬಿಡುಗಡೆ ಆಗಿದ್ದಾರೆ. ನಗರದ ಸಕ್ರಿಯ ಪ್ರಕರಣಗಳ ಸಂಖ್ಯೆ 17,978ಕ್ಕೆ ಇಳಿಕೆಯಾಗಿದೆ.
ಇಂದು 7 ಮಂದಿ ಮೃತಪಟ್ಟಿದ್ದು, ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 3,945ಕ್ಕೆ ಏರಿಕೆಯಾಗಿದೆ. ತೀವ್ರ ನಿಗಾ ಘಟಕದಲ್ಲಿ 480 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ.