ಬೆಂಗಳೂರು: ರಾಜಧಾನಿಯಲ್ಲಿ ಮತ್ತೊಮ್ಮೆ ಕೊರೊನಾ ಆತಂಕ ಮನೆಮಾಡಿದೆ. ಬ್ಯಾಡ್ಮಿಂಟನ್ ಕ್ರೀಡಾ ತಂಡದ ಯಡವಟ್ಟಿನಿಂದಾಗಿ ಓಕಳಿಪುರಂನಲ್ಲಿರುವ ಇಂದ್ರಪ್ರಸ್ಥ ಅಪಾರ್ಟ್ಮೆಂಟ್ನ 27 ಮಂದಿಗೆ ಕೊರೊನಾ ಸೋಂಕು ತಗುಲಿದೆ.
ಬ್ಯಾಡ್ಮಿಂಟನ್ ಟೂರ್ನಮೆಂಟ್: ಇಂದ್ರಪ್ರಸ್ಥ ಅಪಾರ್ಟ್ಮೆಂಟ್ನಲ್ಲಿ 27 ಮಂದಿಗೆ ಕೋವಿಡ್ - ಬೆಂಗಳೂರು ಕೊರೊನಾ ಸೋಂಕಿತರ ಸಂಖ್ಯೆ
ಬೆಂಗಳೂರಿನ ಓಕಳಿಪುರಂನಲ್ಲಿರುವ ಇಂದ್ರಪ್ರಸ್ಥ ಅಪಾರ್ಟ್ಮೆಂಟ್ನಲ್ಲಿ ಒಟ್ಟು 27 ಮಂದಿಗೆ ಕೊರೊನಾ ಸೋಂಕು ತಗುಲಿದ್ದು, ರಾಜಧಾನಿಯಲ್ಲಿ ಮತ್ತೊಮ್ಮೆ ಕೋವಿಡ್ ಆತಂಕ ಮನೆಮಾಡಿದೆ.
ಡಿಸೆಂಬರ್ 19 ರಂದು ಅಪಾರ್ಟ್ಮೆಂಟ್ ನಿವಾಸಿಗಳು ಬ್ಯಾಡ್ಮಿಂಟನ್ ಕ್ರೀಡಾಕೂಟ ಆಯೋಜನೆ ಮಾಡಿದ್ದರು. ಇದಾದ ಬಳಿಕ ಅಪಾರ್ಟ್ಮೆಂಟ್ನಲ್ಲಿರುವವರು ವಿದೇಶಕ್ಕೆ ಹೋಗುವ ಸಲುವಾಗಿ ಕೋವಿಡ್ ಟೆಸ್ಟ್ ಮಾಡಿಸಿದ್ದಾರೆ. ಈ ವೇಳೆ ಕೊರೊನಾ ಸೋಂಕು ಪತ್ತೆಯಾಗಿದೆ. ಬಳಿಕ ಟೂರ್ನಮೆಂಟ್ನಲ್ಲಿ ಭಾಗವಹಿಸಿದವರನ್ನು ಟೆಸ್ಟ್ ಮಾಡಲಾಗಿದ್ದು, ಒಟ್ಟು 27 ಮಂದಿಗೆ ಸೋಂಕು ತಗುಲಿದೆ.
ಈಗಾಗಲೇ ಶೋಭ ಇಂದ್ರಪ್ರಸ್ಥ ಅಪಾರ್ಟ್ಮೆಂಟ್ನ 14 ಮನೆಗಳನ್ನು ಕಂಟೈನ್ಮೆಂಟ್ ಝೋನ್ ಮಾಡಲಾಗಿದೆ. ಅಪಾರ್ಟ್ಮೆಂಟ್ನ ಮೂರು ಮಹಡಿಗಳನ್ನು ಸೀಲ್ಡೌನ್ ಮಾಡಲಾಗಿದ್ದು, ಸೋಂಕಿತರ ಸಂಪರ್ಕಿತರನ್ನು ಪತ್ತೆ ಹಚ್ಚುವ ಕಾರ್ಯ ನಡೆಯುತ್ತಿದೆ.