ಕರ್ನಾಟಕ

karnataka

ಎಸ್​ಸಿ, ಎಸ್​ಟಿ ಅಭಿವೃದ್ಧಿಗೆ 27,699 ಕೋಟಿ ರೂ. ಅನುದಾನ ಮೀಸಲು

By

Published : May 28, 2020, 8:18 PM IST

2020-21ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಅಭಿವೃದ್ಧಿಗೆ 19,432.22 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ 8,267.30 ಕೋಟಿ ರೂ. ಸೇರಿ 27,699.52 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಇದಕ್ಕೆ ಎಲ್ಲಾ ಇಲಾಖೆಗಳ ಕ್ರಿಯಾ ಯೋಜನೆಗಳ ಬಗ್ಗೆ ಚರ್ಚಿಸಿ ಅನುಮೋದನೆ ಪಡೆಯಲಾಯಿತು.

SC and ST development
ಎಸ್​ಸಿ, ಎಸ್​ಟಿ ಅನುದಾನ ಕುರಿತು ಗೋವಿಂದ ಕಾರಜೋಳ ಅಭಿಪ್ರಾಯ

ಬೆಂಗಳೂರು: 2020-21ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗೆ 27,699.52 ಕೋಟಿ ರೂ. ಅನುದಾನಕ್ಕೆ ರಾಜ್ಯ ಅಭಿವೃದ್ಧಿ ಪರಿಷತ್ ಒಪ್ಪಿಗೆ ನೀಡಿದೆ.

ಎಸ್​ಸಿ, ಎಸ್​ಟಿ ಅನುದಾನ ಕುರಿತು ಗೋವಿಂದ ಕಾರಜೋಳ ಅಭಿಪ್ರಾಯ

ವಿಧಾನಸೌಧದಲ್ಲಿ ಸಿಎಂ ಅಧ್ಯಕ್ಷತೆಯಲ್ಲಿ ನಡೆದ ರಾಜ್ಯ ಅನುಸೂಚಿತ ಜಾತಿ/ ಅನುಸೂಚಿತ ಪಂಗಡಗಳ ರಾಜ್ಯ ಅಭಿವೃದ್ಧಿ ಪರಿಷತ್ತು ಸಭೆಯಲ್ಲಿ 2020-21ನೇ ಸಾಲಿನಲ್ಲಿ ಪರಿಶಿಷ್ಟ ಜಾತಿ ಅಭಿವೃದ್ಧಿಗೆ 19,432.22 ಕೋಟಿ ರೂ. ಹಾಗೂ ಪರಿಶಿಷ್ಟ ಪಂಗಡದ ಅಭಿವೃದ್ಧಿಗಾಗಿ 8,267.30 ಕೋಟಿ ರೂ. ಸೇರಿ 27,699.52 ಕೋಟಿ ರೂ. ಅನುದಾನ ಒದಗಿಸಲಾಗಿದೆ. ಇದಕ್ಕೆ ಎಲ್ಲಾ ಇಲಾಖೆಗಳ ಕ್ರಿಯಾ ಯೋಜನೆಗಳ ಬಗ್ಗೆ ಚರ್ಚಿಸಿ ಅನುಮೋದನೆ ಪಡೆಯಲಾಯಿತು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಡಿಸಿಎಂ ಗೋವಿಂದ ಕಾರಜೋಳ, ಎಲ್ಲಾ ಇಲಾಖೆಗಳು ಶೇ 92 ರಷ್ಟು ಪ್ರಗತಿ ಸಾಧಿಸಲಾಗಿದೆ. 23 ಲಕ್ಷ ಮಕ್ಕಳಿಗೆ ಸಮವಸ್ತ್ರ, ಭೋಜನಕ್ಕೆ ಅನುದಾನ ನೀಡಲಾಗಿದೆ. ಸಾಮಾಜಿಕ ಭದ್ರತಾ ಯೋಜನೆಯಡಿ 25 ಲಕ್ಷ ಪಲಾನುಭವಿಗಳಿಗೆ 18 ಲಕ್ಷ ಖರ್ಚು ಮಾಡಲಾಗಿದೆ. ಈ ವರ್ಷವೂ ಪರಿಶಿಷ್ಟರ ಕಲ್ಯಾಣಕ್ಕೆ ಹೆಚ್ಚಿನ ಆಧ್ಯತೆ ನೀಡಲಾಗಿದೆ ಎಂದರು.

ಗಂಗಾ ಕಲ್ಯಾಣ, ಸ್ವಯಂ ಉದ್ಯೋಗಕ್ಕೆ ಒತ್ತು ನೀಡಲಾಗುವುದು. ವಸತಿ ಶಾಲೆಗಳಲ್ಲಿ 42,000 ಜನರಿಗೆ ಕ್ವಾರಂಟೈನ್ ಮಾಡಲಾಗಿದೆ. ಅವರಿಗೆ ಊಟ, ವಸತಿ ವ್ಯವಸ್ಥೆಯನ್ನು ಸಮಾಜ ಕಲ್ಯಾಣ ಇಲಾಖೆ ಅನುದಾನದಲ್ಲಿ ಒದಗಿಸಿದ್ದೇವೆ ಎಂದು ತಿಳಿಸಿದರು.

ನೆರೆ ಬಂದಾಗ ಎಸ್​ಸಿಪಿ, ಟಿಎಸ್​ಪಿ ಅನುದಾನದಲ್ಲಿ ದಲಿತ ಕಾಲೋನಿಗಳ ಅಭಿವೃದ್ಧಿಗೆ 1,100 ಕೋಟಿ ರೂ. ನೀಡಿದ್ದೇವೆ. ಸಮಾಜ ಕಲ್ಯಾಣ ಇಲಾಖೆಯಿಂದ 1,100 ಕೋಟಿ ರೂ. ಬಿಡುಗಡೆ ಮಾಡಲಾಗಿದೆ. ಇದನ್ನು ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ನೀಡಿದ್ದೇವೆ ಎಂದು ವಿವರಿಸಿದರು.

ಕೊರೊನಾ ಹಿನ್ನೆಲೆ ಘೋಷಿಸಲಾದ ಚಮ್ಮಾರರ ವಿಶೇಷ ಪ್ಯಾಕೇಜ್​ನಲ್ಲಿ ಎಲ್ಲಾ 11,722 ಫಲಾನುಭವಿಗಳಿಗೆ ತಲಾ ಐದು ಸಾವಿರ ರೂಪಾಯಿ ಪರಿಹಾರ ನೀಡಲಾಗಿದೆ. ಚರ್ಮ ಕೈಗಾರಿಕಾ ಅಭಿವೃದ್ಧಿ ನಿಗಮದ ಮೂಲಕ ಫಲಾನುಭವಿಗಳಿಗೆ ಪರಿಹಾರ ತಲುಪುವಂತೆ ಮಾಡಿದ್ದೇವೆ ಎಂದು ತಿಳಿಸಿದರು.

ಸಭೆಯಲ್ಲಿ ಸಿಎಂ ನೀಡಿದ ಸೂಚನೆ ಏನು?:

ಕೋವಿಡ್-19 ಹಿನ್ನೆಲೆಯಲ್ಲಿ ಉತ್ತರ ಕರ್ನಾಟಕದ ಜಿಲ್ಲೆಗಳಿಗೆ 25-30 ಸಾವಿರ ಜನ ಹಿಂದಿರುಗಿದ್ದಾರೆ. ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಕಾರ್ಯಕ್ರಮದಡಿ ಪ್ರತಿಯೊಂದು ಪರಿಶಿಷ್ಟ ಜಾತಿ, ಪಂಗಡದ ಕುಟುಂಬಕ್ಕೆ ಉದ್ಯೋಗ ಕಾರ್ಡ್‍ಗಳನ್ನು ಕಡ್ಡಾಯವಾಗಿ ವಿತರಿಸುವಂತೆ ಸೂಚಿಸಿದರು‌. ಉದ್ಯೋಗ ಖಾತರಿ ಯೋಜನೆಯಡಿ ಕಾರ್ಮಿಕರಿಗೆ ಪ್ರಸ್ತುತ 100 ದಿನಗಳಿರುವ ಕೆಲಸದ ದಿನಗಳನ್ನು 150 ದಿನಗಳಿಗೆ ಹೆಚ್ಚಿಸಲು ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸೂಚಿಸಿದರು.

ABOUT THE AUTHOR

...view details