ಬೆಂಗಳೂರು: ವಿಧಾನ ಪರಿಷತ್ನ ಉಪ ಸಭಾಪತಿ ಸ್ಥಾನಕ್ಕೆ ಜನವರಿ 29ರಂದು ಚುನಾವಣೆ ನಡೆಯಲಿದೆ. ವಿಧಾನ ಪರಿಷತ್ತಿನ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಮ 8(1)ರ ಅನ್ವಯ ಉಪ ಸಭಾಪತಿಯವರ ಸ್ಥಾನಕ್ಕೆ ಚುನಾವಣೆಯನ್ನು ಸಭಾಪತಿಯವರು ಜ.29ರಂದು ನಡೆಸಲು ದಿನಾಂಕ ನಿಗದಿಪಡಿಸಿದ್ದಾರೆ.
ಈ ಕುರಿತು ವಿಧಾನ ಪರಿಷತ್ನ ಕಾರ್ಯದರ್ಶಿ ಕೆ.ಆರ್.ಮಹಾಲಕ್ಷ್ಮಿ ಅವರು ಪ್ರಕಟಣೆ ಹೊರಡಿಸಿದ್ದಾರೆ. ಜ.28ರ ಮಧ್ಯಾಹ್ನ 3 ಗಂಟೆಯೊಳಗೆ ಉಪ ಸಭಾಪತಿಯನ್ನು ಆರಿಸುವ ಬಗ್ಗೆ ಕಾರ್ಯದರ್ಶಿಯವರಿಗೆ ಹೆಸರಿಸಿ ಕೊಠಡಿ ಸಂಖ್ಯೆ: 156-ಸಿ, ವಿಧಾನಸೌಧದ ಮೊದಲನೇ ಮಹಡಿ, ವಿಧಾನಸೌಧ, ಬೆಂಗಳೂರು ಇಲ್ಲಿ ಲಿಖಿತ ಮೂಲಕ ಸೂಚನೆಯನ್ನು ಅಭ್ಯರ್ಥಿಯು ಅವರ ಹೆಸರನ್ನು ಸೂಚಿಸುವವರೊಂದಿಗೆ ಅಥವಾ ಅನುಮೋದಕರೊಂದಿಗೆ ಖುದ್ದಾಗಿ ಸಲ್ಲಿಸಬೇಕು.
ಇದನ್ನೂ ಓದಿ:ರಾಜಕೀಯ ತಿರುವು ಪಡೆದುಕೊಂಡ ಉಪಸಭಾಪತಿ ಎಸ್.ಎಲ್.ಧರ್ಮೇಗೌಡರ ಆತ್ಮಹತ್ಯೆ ಪ್ರಕರಣ..!